ಕರ್ನಾಟಕ

karnataka

By

Published : Aug 9, 2023, 10:54 PM IST

ETV Bharat / state

ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ

2023- 24ನೇ ಸಾಲಿನ ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು, ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

various Standing Committees of the Legislature
ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಂಗಳೂರು:2023- 24ನೇ ಸಾಲಿನ ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಸಾರ್ವಜನಿಕ ಲೆಕ್ಕಪತ್ರ ಗಳ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಆರ್. ಅಶೋಕ್ ನೇಮಕವಾಗಿದ್ದಾರೆ. ಸಾರ್ವಜನಿಕ ಉದ್ದಿಮೆಗಳ ಸಮಿತಿ ಅಧ್ಯಕ್ಷಾಗಿ ತನ್ವೀರ್ ಸೇಠ್, ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಶಾಸಕ ನರೇಂದ್ರ ಸ್ವಾಮಿ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಶಾಸಕ ಪುಟ್ಟರಂಗ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.

ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರಾಗಿ ಎಂ.ವೈ. ಪಾಟೀಲ್, ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಹೆಚ್. ಡಿ. ರೇವಣ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಶಾಸಕಿ ರೂಪಕಲಾ, ಗ್ರಂಥಾಲಯ ಸಮಿತಿಯ ಅಧ್ಯಕ್ಷರಾಗಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸ್ಥಳೀಯ ಸಂಸ್ಥೆಗಳ ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಅಧ್ಯಕ್ಷರಾಗಿ ಶಾಸಕ ಭರಮಗೌಡ ಅಲಗೌಡ ಕಾಗೆ, ಅಂದಾಜು ಸಮಿತಿಗೆ ಶಾಸಕ ಯಶವಂತರಾಯಗೌಡ ಪಾಟೀಲ್, ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷರಾಗಿ ಬಿ.ಕೆ. ಸಂಗಮೇಶ್ ನೇಮಕಗೊಂಡಿದ್ದಾರೆ.

ಹಕ್ಕು ಬಾಧ್ಯತೆಗಳ ಸಮಿತಿ ಅಧ್ಯಕ್ಷರಾಗಿ ಬಿ.ಆರ್. ಪಾಟೀಲ್, ಖಾಸಗಿ ಸದಸ್ಯರುಗಳ ವಿಧೇಯಕ ಹಾಗೂ ನಿರ್ಣಯಕಗಳ ಸಮಿತಿ, ಅರ್ಜಿಗಳ ಸಮಿತಿ, ವಸತಿ ಸೌಕರ್ಯಗಳ ಸಮಿತಿ ಅಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವರನ್ನು ನೇಮಿಸಲಾಗಿದೆ. ಎಲ್ಲಾ ಸಮಿತಿಗಳಿಗೂ ಅಧ್ಯಕ್ಷರು ಸೇರಿ ವಿಧಾನಸಭೆ ಸದಸ್ಯರು ಮತ್ತು ವಿಧಾನ ಪರಿಷತ್ ಸದಸ್ಯರು ನೇಮಕಗೊಂಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು-ಕನಕಪುರ ರಸ್ತೆ ಸುರಕ್ಷತೆ ಕಲ್ಪಿಸದ NHAI ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

ABOUT THE AUTHOR

...view details