ಕರ್ನಾಟಕ

karnataka

ETV Bharat / state

ರಾಜ್ಯ ಹೈಕೋರ್ಟ್‌ಗೆ ಐವರು ನೂತನ ನ್ಯಾಯಮೂರ್ತಿಗಳ ನೇಮಕ - ಕೇಂದ್ರ ಕಾನೂನು ಸಚಿವಾಲಯ ಆದೇಶ

ಕರ್ನಾಟಕ ಹೈಕೋರ್ಟ್‌ಗೆ ಐವರು ನೂತನ ‌ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ.

ಹೈಕೋರ್ಟ್‌ಗೆ ಐವರು ನೂತನ ನ್ಯಾಯಮೂರ್ತಿಗಳ ನೇಮಕ

By

Published : Nov 7, 2019, 9:39 PM IST

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ಐವರು ನೂತನ ‌ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ.

ಎನ್.ಎಸ್.ಸಂಜಯ ಗೌಡ, ಜ್ಯೋತಿ ಮೂಲಿಮನಿ, ಆರ್.ನಟರಾಜ್, ಹೇಮಂತ್ ಚಂದನಗೌಡರ್ ಹಾಗೂ ಪ್ರದೀಪ್ ಸಿಂಗ ಯೆರೂರು ಇವರನ್ನು ಕರ್ನಾಟಕ ಹೈಕೋರ್ಟ್ ಹಂಗಾಮಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

ಅಕ್ಟೋಬರ್ 5ರಂದು ಈಗಾಗಲೇ ಆಯ್ಕೆಯಾದ ಐವರು ನ್ಯಾಯಮೂರ್ತಿಗಳು ಸೇರಿ ಒಟ್ಟು 8 ಮಂದಿ ವಕೀಲರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಐವರನ್ನು ಮಾತ್ರ ನೇಮಿಸಿ ಆದೇಶ ಹೊರಡಿಸಿದೆ. ಹೀಗಾಗಿ ನ್ಯಾಯಾಲಯದಲ್ಲಿ ಬಾಕಿ ಇರುವ ಕೇಸ್​ಗಳು ತ್ವರಿತವಾಗಿ ಇತ್ಯರ್ಥವಾಗುವ ನಿರೀಕ್ಷೆ ಮೂಡಿದಂತಾಗಿದೆ.

ABOUT THE AUTHOR

...view details