ಬೆಂಗಳೂರು: 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜ.17ರ ಸೋಮವಾರದಿಂದhttps://dec.karnataka.gov.in ಮೂಲಕ ಆನ್-ಲೈನ್ ಅರ್ಜಿ ಹಾಕಿಕೊಳ್ಳಬಹುದಾಗಿದ್ದು, ಅರ್ಜಿ ಸಲ್ಲಿಸಲು ಜ.21 ಕೊನೆಯ ದಿನವಾಗಿರಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ಇಷ್ಟದ ಆಯ್ದ 10 ಸರ್ಕಾರಿ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಆಯ್ಕೆಯಾದವರಿಗೆ ಈ ಕಾಲೇಜುಗಳಲ್ಲೇ ಕಾರ್ಯನಿರ್ವಹಿಸಲು ಆದಷ್ಟು ಮಟ್ಟಿಗೆ ಅವಕಾಶ ಕೊಡಲಾಗುವುದು. ಒಂದು ವೇಳೆ, ಅಭ್ಯರ್ಥಿಗಳ ಆಯ್ಕೆಯ ಕಾಲೇಜುಗಳಲ್ಲಿ ವಾರಕ್ಕೆ 15 ಗಂಟೆಗಳ ಕಾರ್ಯಭಾರ ಇಲ್ಲದಿದ್ದ ಪಕ್ಷದಲ್ಲಿ ಮಾತ್ರ ಬೇರೆ ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಿ ಕೊಡಲಾಗುವುದು ಎಂದು ಅವರು ಹೇಳಿದ್ದಾರೆ.
ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿರುವವರಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು. ಅಲ್ಲದೆ, ವಿದ್ಯಾರ್ಹತೆ ಮತ್ತು ಸೇವಾ ವಿವರಗಳ ಆಧಾರದ ಮೇಲೆ ನಾನಾ ಮಾನದಂಡಗಳ ಅನ್ವಯ ರಾಜ್ಯವ್ಯಾಪ್ತಿಯ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಹತೆ ಮತ್ತು ಅಂಕಗಳ ವಿವರ: