ಬೆಂಗಳೂರು: ಇತ್ತೀಚಿಗೆ ಕಾಗಿನೆಲೆ ಮಹಾಸಂಸ್ಥಾನದ ನಿರಂಜನಾನಂದಪುರಿ ಶ್ರೀಗಳ ನೇತೃತ್ವದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ನಿವಾಸದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಿದಂತೆ ಕುರುಬರನ್ನು ಎಸ್ಟಿ ವರ್ಗಕ್ಕೆ ಸೇರಿಸಲು ಒತ್ತಾಯಿಸುವ ಹೋರಾಟ ಸಮಿತಿಗೆ ಪದಾಧಿಕಾರಿಗಳನ್ನು ನೇಮಿಸಲಾಗಿದೆ.
ಕುರುಬರ ಎಸ್ಟಿ ಹೋರಾಟ ಸಮಿತಿಗೆ ಪದಾಧಿಕಾರಿಗಳ ನೇಮಕ - ಕುರುಬ ಎಸ್ಟಿ ಹೋರಾಟ ಸಮಿತಿಗೆ ಪದಾಧಿಕಾರಿಗಳ ನೇಮಕ
ಕುರುಬರನ್ನು ಎಸ್ಟಿ ವರ್ಗಕ್ಕೆ ಸೇರಿಸಲು ಒತ್ತಾಯಿಸುವ ಹೋರಾಟ ಸಮಿತಿಗೆ ಪದಾಧಿಕಾರಿಗಳನ್ನು ನೇಮಿಸಲಾಗಿದೆ.
ಕುರುಬ ಎಸ್ಟಿ ಹೋರಾಟ ಸಮಿತಿಗೆ ಪದಾಧಿಕಾರಿಗಳ ನೇಮಕ
ಸಮಿತಿಗೆ ಮಹಾ ಮಾರ್ಗದರ್ಶಕರಾಗಿ ಕಾಗಿನೆಲೆ ಸಂಸ್ಥಾನದ ನಿರಂಜನಾನಂದಪುರಿ ಶ್ರೀ, ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಶ್ರೀ, ತಿಂಥಿಣೀ ಕ್ಷೇತ್ರದ ಸಿದ್ದರಾಮಾನಂದಪುರಿ ಶ್ರೀ ಹಾಗೂ ಮೈಸೂರಿನ ಶಿವಾನಂದಪುರಿ ಶ್ರೀ ಇರಲಿದ್ದಾರೆ.
ಹೋರಾಟ ಸಮಿತಿಯ ಗೌರವಾಧ್ಯಕ್ಷರಾಗಿ ಸಚಿವ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್ ಮುಖಂಡ ಹೆಚ್.ಎಂ.ರೇವಣ್ಣ, ಎಂಎಲ್ಸಿ ಹೆಚ್.ವಿಶ್ವನಾಥ್, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಕೆ.ವಿರೂಪಾಕ್ಷಪ್ಪ ಅವರನ್ನು ನೇಮಿಸಲಾಗಿದೆ ಎಂದು ಕಾಗಿನೆಲೆ ಮಹಾಸಂಸ್ಥಾನ ಮಠ ಪ್ರಕಟಣೆಯಲ್ಲಿ ತಿಳಿಸಿದೆ.