ಬೆಂಗಳೂರು :ರಾಜ್ಯದ 24 ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ಹೊಸದಾಗಿ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 24ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ಹೊಸ ಸಾರಥಿಗಳನ್ನು ನೇಮಕ ಮಾಡಲಾಗಿದ್ದು ಪಕ್ಷದ ಕಾರ್ಯಕರ್ತರಿಗೆ, ಪಕ್ಷದ ನಿಷ್ಠಾವಂತರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಬರಲಿರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಹಾಗೂ ಸ್ಥಳೀಯವಾಗಿ ಪಕ್ಷದ ಸಂಘಟನೆ ಉದ್ದೇಶವನ್ನಿಟ್ಟುಕೊಂಡು ನೇಮಕಾತಿಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಲಾಗಿದೆ. ಹೊಸದಾಗಿ ನೇಮಕಗೊಂಡ ಅಧ್ಯಕ್ಷರುಗಳಿಗೆ ಪ್ರತ್ಯೇಕವಾಗಿ ಆಯಾ ಇಲಾಖೆ ಮುಖಾಂತರ ಆದೇಶಗಳನ್ನು ಕಳುಹಿಸಲಾಗಿದೆ.
ಮೈಸೂರು ವಸ್ತ ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ ಎಂ.ಕೆ. ಶ್ರೀನಿವಾಸ್, ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷರಾಗಿ ಎಂ.ಕೆ. ವಾಸುದೇವ್, ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರಾಗಿ ಎನ್.ಎಂ. ರವಿನಾರಾಯಣ ರೆಡ್ಡಿ, ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾಗಿ ಬಿ.ಸಿ. ನಾರಾಯಣಸ್ವಾಮಿ,
ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ವಿಜಯಪುರ ಜಿಲ್ಲೆಯ ಚಂದ್ರಶೇಖರ ಕವಟಗಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಣಿರಾಜ ಶೆಟ್ಟಿ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷರಾಗಿ ಉತ್ತರ ಕನ್ನಡ ಜಿಲ್ಲೆಯ ಗೋವಿಂದ ಜಟ್ಟಪ್ಪ ನಾಯ್ಕ, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾಗಿ ಮೈಸೂರು ಜಿಲ್ಲೆಯ ಎಂ. ಶಿವಕುಮಾರ್, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಶಿವಮೊಗ್ಗ ಜಿಲ್ಲೆಯ ಎನ್. ರೇವಣಪ್ಪ ಕೋಳಗಿ, ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷರಾಗಿ ರಾಮನಗರ ಜಿಲ್ಲೆಯ ಗೌತಮ್ ಗೌಡ ಎಂ ಅವರು ನೇಮಕಗೊಂಡಿದ್ದಾರೆ.
ನಿಗಮ ಮಂಡಳಿಗಳ ಅಧ್ಯಕ್ಷರನ್ನು ಬದಲಾಯಿಸಿ ಹೊಸಬರನ್ನು ನೇಮಕ ಮಾಡುವಂತೆ ಪಕ್ಷದ ಮುಖಂಡರು ಮತ್ತು ಮುಖ್ಯಮಂತ್ರಿಗಳ ಮೇಲೆ ಪಕ್ಷದ ಕಾರ್ಯಕರ್ತರು ಬಹಳ ದಿನಗಳಿಂದ ಒತ್ತಡ ಹಾಕಿದ್ದರು. ಪಕ್ಷದಿಂದ ನಿಗಮ ಮಂಡಳಿಗಳ ಅಧ್ಯಕ್ಷರಿಗೆ - ಉಪಾಧ್ಯಕ್ಷರಿಗೆ ರಾಜೀನಾಮ ನೀಡುವಂತೆ ಸಾಕಷ್ಟು ಸಾರಿ ಸೂಚನೆ ನೀಡಿದ್ದರೂ ಸಹ ಯಾರೂ ಸ್ವ ಪ್ರೇರಣೆಯಿಂದ ರಾಜೀನಾಮೆ ನೀಡಿರಲಿಲ್ಲ.
ಅಂತಿಮವಾಗಿ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಪಕ್ಷದ ಶಾಸಕರು ಮತ್ತು ಕೆಲವು ಪ್ರಮುಖರನ್ನು ಹೊರತುಪಡಿಸಿ 50 ಕ್ಕೂ ಹೆಚ್ಚು ನಿಗಮ ಮಂಡಳಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳ ನೆಮಕಾತಿಯನ್ನು ರಾಜ್ಯ ಸರಕಾರ ರದ್ದುಪಡಿಸಿ ಆದೇಶ ಹೊರಡಿಸಿತ್ತು.
ಹೊಸದಾಗಿ ನೇಮಕ ಗೊಂಡ ಅಧ್ಯಕ್ಷ - ಉಪಾಧ್ಯಕ್ಷರ ಪಟ್ಟಿ ಹೀಗಿದೆ.
- ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾಗಿ ಬೆಂಗಳೂರಿನಬಿ.ಸಿ. ನಾರಾಯಣಸ್ವಾಮಿ
- ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ವಿಜಯಪುರ ಜಿಲ್ಲೆಯ ಚಂದ್ರಶೇಖರ ಕವಟಗಿ
- ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಯಾದಗಿರಿ ಜಿಲ್ಲೆಯ ದೇವೇಂದ್ರ ನಾಥ್ ಕೆ. ನಾದ್
- ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ತುಮಕೂರು ಜಿಲ್ಲೆಯ ಚಂಗಾವರ ಮಾರಣ್ಣ
- ಮೈಸೂರು ವಸ್ತ ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ ಮೈಸೂರು ಜಿಲ್ಲೆಯ ಎಂ.ಕೆ. ಶ್ರೀನಿವಾಸ್
- ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷರಾಗಿ ಕೋಲಾರ ಜಿಲ್ಲೆಯ ಎಂ.ಕೆ. ವಾಸುದೇವ್
- ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಎನ್.ಎಂ. ರವಿನಾರಾಯಣ ರೆಡ್ಡಿ
- ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಉಡುಪಿ ಜಿಲ್ಲೆಯ ಮಣಿರಾಜ ಶೆಟ್ಟಿ
- ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷರಾಗಿ ಉತ್ತರ ಕನ್ನಡ ಜಿಲ್ಲೆಯ ಗೋವಿಂದ ಜಟ್ಟಪ್ಪ ನಾಯ್ಕ
- ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾಗಿ ಮೈಸೂರು ಜಿಲ್ಲೆಯ ಎಂ. ಶಿವಕುಮಾರ್
- ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಶಿವಮೊಗ್ಗ ಜಿಲ್ಲೆಯ ಎನ್. ರೇವಣಪ್ಪ ಕೋಳಗಿ
- ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷರಾಗಿ ರಾಮನಗರ ಜಿಲ್ಲೆಯ ಗೌತಮ್ ಗೌಡ ಎಂ.
- ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾಗಿ ಕೊಡಗು ಜಿಲ್ಲೆಯ ಎನ್.ಎಂ. ರವಿ ಕಾಳಪ್ಪ
- ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ದಕ್ಷಿಣಕನ್ನಡ ಜಿಲ್ಲೆಯ ಎ.ವಿ. ತೀರ್ಥರಾಮ
- ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಯಾದಗಿರಿ ಜಿಲ್ಲೆಯದೇವೇಂದ್ರ ನಾಥ್ ಕೆ. ನಾದ್
- ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ತುಮಕೂರು ಜಿಲ್ಲೆಯ ಚಂಗಾವರ ಮಾರಣ್ಣ
- ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೆ.ವಿ. ನಾಗರಾಜ
- ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬೆಳಗಾವಿ ಜಿಲ್ಲೆಯಮಾರುತಿ ಮಲ್ಲಪ್ಪ ಅಷ್ಟಗಿ
- ಕಾಡಾ (ತುಂಗಭದ್ರಾ ಯೋಜನೆ) ಅಧ್ಯಕ್ಷರಾಗಿ ರಾಯಚೂರು ಜಿಲ್ಲೆಯ ಕೊಲ್ಲಾ ಶೇಷಗಿರಿ ರಾವ್
- ಕಾಡಾ(ಕಾವೇರಿ ಜಲಾನಯನ ಯೋಜನೆ) ಅಧ್ಯಕ್ಷರಾಗಿ ಚಾಮರಾಜನಗರ ಜಿಲ್ಲೆಯ ಜಿ. ನಿಜಗುಣರಾಜು
- ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾಗಿ ಬೆಳಗಾವಿ ಜಿಲ್ಲೆಯ ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ
- ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬೆಂಗಳೂರಿನಎಂ. ಸರವಣ
- ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿಕ್ಕಮಗಳೂರು ಜಿಲ್ಲೆಯ ಕೆ.ಪಿ. ವೆಂಕಟೇಶ್
ಇದನ್ನೂ ಓದಿ :ಸಿ ಆರ್ ಝೆಡ್ ವಿಸ್ತರಣೆಗೆ ಅನುಮತಿ - ಕರಾವಳಿ ಪ್ರದೇಶ ಅಭಿವೃದ್ಧಿಯಾಗಲಿದೆ: ಸಿಎಂ ವಿಶ್ವಾಸ