ಕರ್ನಾಟಕ

karnataka

ETV Bharat / state

ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರದ ವಿಸ್ತರಣೆ-ಬಲವರ್ಧನೆಗೆ ಕ್ರಮ: ಆರಗ ಜ್ಞಾನೇಂದ್ರ

ವೀಸಾ ಅವಧಿ ಮುಗಿದರೂ ದೇಶದಲ್ಲಿಯೇ ಉಳಿದುಕೊಳ್ಳುವ ವಿದೇಶಿ ವಲಸಿಗರು ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಅಪಾಯವಿದೆ. ಹೀಗಾಗಿ ಅವರನ್ನು ಗಡಿಪಾರು ಮಾಡುವ ಅಗತ್ಯವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ, ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Araga Jnanendra
ಆರಗ ಜ್ಞಾನೇಂದ್ರ

By

Published : Aug 10, 2022, 3:27 PM IST

ಬೆಂಗಳೂರು: ಅಕ್ರಮ ವಿದೇಶಿ ವಲಸಿಗರನ್ನು ಹಿಡಿದಿಡುವ ದಿಗ್ಬಂಧನ ಕೇಂದ್ರದ ಸಾಮರ್ಥ್ಯವನ್ನು ಇಮ್ಮಡಿಗೊಳಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ವಿಧಾನಸೌಧದಲ್ಲಿ ಉನ್ನತ ಮಟ್ಟದ ಜಂಟಿ ಸಭೆ ನಡೆಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಭೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಅಕ್ರಮ ವಲಸಿಗರು, ವೀಸಾ ಅವಧಿ ಮುಗಿದರೂ ದೇಶದಲ್ಲಿಯೇ ಉಳಿದುಕೊಳ್ಳುತ್ತಿದ್ದು ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಅಪಾಯವಿದ್ದು ಗಡಿಪಾರು ಮಾಡುವ ಅಗತ್ಯವಿದೆ. ಅಕ್ರಮ ಬಾಂಗ್ಲಾದೇಶಿ ನಾಗರಿಕರೂ ಸೇರಿದಂತೆ ಇತರ ದೇಶದ ವಲಸಿಗರನ್ನು ದೇಶದ ಕಾನೂನಿನಂತೆ ಬಂಧಿಸಿ ಯಾವುದೇ ಕಾರಾಗೃಹಗಳಲ್ಲಿ ಇಡದೆ ಇವರಿಗೆಂದೇ ಇರುವ ದಿಗ್ಬಂಧನ ಕೇಂದ್ರದಲ್ಲಿ ವಸತಿ ಕಲ್ಪಿಸಬೇಕು. ಅದಕ್ಕಾಗಿ ತಕ್ಷಣ ಕ್ರಮ ವಹಿಸಬೇಕಾಗಿದೆ ಎಂದು ತಿಳಿಸಿದರು. ಪ್ರಸ್ತುತ ಬೆಂಗಳೂರಿನ ಸಮೀಪವಿರುವ ನೆಲಮಂಗಲದಲ್ಲಿ 'ದಿಗ್ಬಂಧನ ಕೇಂದ್ರ' (detention center) ಕಾರ್ಯಾಚರಣೆ ನಡೆಸುತ್ತಿದ್ದು, ಅಲ್ಲಿ ಸ್ಥಳಾವಕಾಶದ ಕೊರತೆ ಇದೆ ಎಂದು ರಾಜ್ಯ ಪೊಲೀಸ್ ಮಹನಿರ್ದೇಶಕ ಪ್ರವೀಣ್ ಸೂದ್ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ದಿಗ್ಬಂಧನ ಕೇಂದ್ರದ ಸಾಮರ್ಥ್ಯ ವಿಸ್ತರಣೆಗೆ ಸಮಾಜ ಕಲ್ಯಾಣ ಇಲಾಖೆ ಅನುದಾನ ಒದಗಿಸಬೇಕು ಹಾಗೂ ವಿಳಂಬ ವಿಲ್ಲದಂತೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿ, ಈ ಕುರಿತು ಗೃಹ ಇಲಾಖೆ ಸಲ್ಲಿಸುವ ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಪರಿಗಣಿಸುವಂತೆ ಸಭೆಯಲ್ಲಿದ್ದ ಹಿರಿಯ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ:ಜಲಜೀವನ್​​ ಮಿಷನ್: ಗುರಿ ಮೀರಿದ ಸಾಧನೆಗೆ ಸಿಎಂ ಬೊಮ್ಮಾಯಿ ಸಂತಸ

ABOUT THE AUTHOR

...view details