ಕರ್ನಾಟಕ

karnataka

ETV Bharat / state

ಶಾಲೆಯಲ್ಲಿ ಹಿಜಾಬ್, ಕೇಸರಿ ಶಾಲಿಗೆ ಇಲ್ಲ ಅವಕಾಶ: ಗೃಹ ಸಚಿವ ಆರಗ ಜ್ಞಾನೇಂದ್ರ - ರಾಜ್ಯ ವಿಪತ್ತು ಸ್ಪಂದನಾ ಪಡೆ ವಾಹನಗಳ ಲೋಕಾರ್ಪಣೆ

ಶಾಲೆಯಲ್ಲಿ ನಾವೆಲ್ಲಾ ಭಾರತ ಮಾತೆಯ ಮಕ್ಕಳು ಎನ್ನೋ ಭಾವನೆ ಇರಬೇಕು‌. ಪಾರ್ಥನೆ ಮಾಡುವುದಕ್ಕೆ ದೇವಸ್ಥಾನ, ಚರ್ಚ್, ಮಸಿದಿ ಇದೆ‌. ಶಾಲೆಗಳಿಗೆ ಕೇಸರಿ ಶಾಲು ಹಾಗೂ ಹಿಜಾಬ್ ಅನ್ನು ಧರಿಸಿಕೊಂಡು ವಿದ್ಯಾರ್ಥಿಗಳು ಬರಬಾರದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ

By

Published : Feb 3, 2022, 12:50 PM IST

ಬೆಂಗಳೂರು: ಶಾಲೆಗಳಲ್ಲಿ ಕೇಸರಿ ಶಾಲು ಹಾಗೂ ಹಿಜಾಬ್ ಅನ್ನು ಧರಿಸಿಕೊಂಡು ಬರಬಾರದು. ಧರ್ಮ ಆಚರಣೆಗೆ ಶಾಲೆ‌ ಇರುವುದಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ರಾಜ್ಯ ವಿಪತ್ತು ಸ್ಪಂದನಾ ಪಡೆಯ ನೂತನ ವಾಹನಗಳ ಲೋಕಾರ್ಪಣೆ ಮಾಡಿ ಬಳಿಕ ಮಾತನಾಡಿದ ಅವರು, ಹಿಜಾಬ್ ಗಲಾಟೆ ಬಗ್ಗೆ ಪ್ರತಿಕ್ರಿಯಿಸುತ್ತ, ಪಾರ್ಥನೆ ಮಾಡುವುದಕ್ಕೆ ದೇವಸ್ಥಾನ, ಚರ್ಚ್, ಮಸೀದಿ ಇದೆ‌. ಆಯಾ ಶಾಲಾ ಆಡಳಿತ ಮಂಡಳಿ ಇದನ್ನು ಪಾಲಿಸಬೇಕು. ಶಾಲೆಯಲ್ಲಿ ನಾವೆಲ್ಲ ಭಾರತ ಮಾತೆಯ ಮಕ್ಕಳು ಎನ್ನೋ ಭಾವನೆ ಇರಬೇಕು‌. ಹೀಗಾಗಿ, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ಶಿಕ್ಷಣ ಮಂತ್ರಿ ಹೇಳಿದ್ದಾರೆ. ಗೊಂದಲ ಮಾಡುವ ಕೆಲ ಸಂಘಟನೆ ಮೇಲೆ ನಿಗಾ ಇಟ್ಟಿದ್ದೇವೆ ಎಂದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ

ಶಾಲೆಗೆ ಸಮವಸ್ತ್ರ ಕಡ್ಡಾಯ ಅಂತಾ ಈಗಾಗಲೇ ಶಿಕ್ಷಣ ಸಚಿವರು ಹೇಳಿದ್ದಾರೆ. ವಿದ್ಯಾರ್ಥಿಗಳು ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎಂಬ ಸಂಸ್ಕಾರ ಕಲಿಯಬೇಕು. ಧರ್ಮ ಆಚರಣೆಗೆ ಪೂಜೆ ಪುನಸ್ಕಾರಕ್ಕೆ ಚರ್ಚ್, ಮಸೀದಿ, ದೇವಸ್ಥಾನಗಳಿವೆ. ಅಲ್ಲಿ ಏನು ಮಾಡಲೂ ನಾವು ಸ್ವತಂತ್ರರು. ದೇಶದ ಐಕ್ಯತೆ ಬಗ್ಗೆ ಶಾಲೆಯಲ್ಲಿ ಸಂಸ್ಕಾರ ಪಡೆಯದಿದ್ದರೆ ಹೇಗಾಗುತ್ತದೆ?. ಎಲ್ಲರೂ ಕೂಡಾ ಯೋಚನೆ ಮಾಡಬೇಕು. ಹಿಜಾಬ್ ಹಿಂದೆ ಇರುವ ಮತೀಯ ಸಂಘಟನೆಗಳ ಬಗ್ಗೆ ಗಮನ ಕೊಡಲು ಪೊಲೀಸರಿಗೆ ಹೇಳಿದ್ದೇನೆ ಎಂದು ತಿಳಿಸಿದರು.

ರಾಷ್ಟ್ರ ಒಗ್ಗಟ್ಟಾಗಬೇಕು ಎಂಬುದಕ್ಕೆ ಅಡ್ಡಗಾಲು ಹಾಕುವವರನ್ನು ಸರಿ ಮಾಡುವ ಕೆಲಸ ನಾವು ಮಾಡಬೇಕಾಗುತ್ತದೆ. ಯಾವುದೇ ಧರ್ಮದವರು ಅವರವರ ಧರ್ಮ ಆಚರಣೆ ಮಾಡಲು ಶಾಲೆಗೆ ಬರುವುದಲ್ಲ. ಎಲ್ಲರೂ ಸೇರಿ ಭಾರತ ಮಾತೆಯ ಮಕ್ಕಳು ಎಂದು ವ್ಯಾಸಂಗಕ್ಕೆ ಬರಬೇಕು. ಶಾಲೆ ಕಾಂಪೌಂಡ್ ಒಳಗೆ ಹಿಜಾಬ್ ಧರಿಸಬಾರದು, ಹಸಿರು ಶಾಲು, ಕೇಸರಿ ಶಾಲು ಧರಿಸಬಾರದು. ಶಾಲಾ ಮ್ಯಾನೇಜ್​ಮೆಂಟ್ ಹೇಳುವ ರೀತಿ ನಡೆದುಕೊಳ್ಳಬೇಕು ಎಂದು ಸ್ಪಷ್ಟಪಡಿಸಿದರು.

ಓದಿ:ಸೋಂಕು ತಗುಲದ ವ್ಯಕ್ತಿಗಳಿಗೆ ಕೋವಿಡ್ ಲಸಿಕೆ ನೀಡಲು ಆದ್ಯತೆ ನೀಡಬೇಕು: ಏಮ್ಸ್​ ತಜ್ಞ

ವಿಪತ್ತು ಸ್ಪಂದನಾ ನೂತನ ವಾಹನ ಲೋಕಾರ್ಪಣೆ: ರಾಜ್ಯ ವಿಪತ್ತು ಸ್ಪಂದನಾ ಪಡೆಯ ನೂತನ ವಾಹನಗಳನ್ನು ಲೋಕಾರ್ಪಣೆ ಮಾಡಲಾಯಿತು. ಹೊಸ ವಾಹನಗಳನ್ನು ಶೋ ರೂಂ ನಿಂದ ತಂದು ವಿಪತ್ತು ಸ್ಪಂದನಾ ಪಡೆಗೆ ಜೋಡಿಸಲಾಗಿದೆ. 20 ಕೋಟಿ ರೂ. ವೆಚ್ಚದಲ್ಲಿ ಎಲ್ಲ ಸಲಕರಣೆಗಳನ್ನು ಖರೀದಿಸಲಾಗಿದೆ.

ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ಇಲಾಖೆ ಡಿಜಿಪಿ ಅಮರ್ ಕುಮಾರ್ ಪಾಂಡೆ, ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ, ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿ ಮಾಲಿನಿ ಕೃಷ್ಣಮೂರ್ತಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details