ಬೆಂಗಳೂರು: ಹೃದಯಾಘಾತಕ್ಕೊಳಗಾಗಿ ಇದೀಗ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿರುವ ಬಹುಬೇಡಿಕೆಯ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಪುನೀತ್ ರಾಜ್ಕುಮಾರ್ ಬರ್ತ್ಡೆಗೆ ವಿಶ್ ಮಾಡಿದ್ದಾರೆ.
ಅನಾರೋಗ್ಯದಲ್ಲೂ ಅಪ್ಪು ಬರ್ತ್ಡೆಗೆ ವಿಶ್ ಮಾಡಿದ್ರು ಅರ್ಜುನ್ ಜನ್ಯ... ವಿಡಿಯೋ ನೋಡಿ - ಫೆಬ್ರವರಿ 27ರಂದು ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಮ್ಯೂಸಿಕಲ್ ಕಂಪೋಸರ್ ಅರ್ಜುನ್ ಜನ್ಯ
ಕಳೆದ ಫೆಬ್ರವರಿ 27ರಂದು ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಮ್ಯೂಸಿಕಲ್ ಕಂಪೋಸರ್ ಅರ್ಜುನ್ ಜನ್ಯ ಅನಾರೋಗ್ಯದ ನಡುವೆ ಕೂಡ ಅಪ್ಪು ಬರ್ತ್ಡೆಗೆ ವಿಶ್ ಮಾಡಿದ್ದಾರೆ.
ಕಳೆದ ಫೆಬ್ರವರಿ 27ರಂದು ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಮ್ಯೂಸಿಕಲ್ ಕಂಪೋಸರ್ ಅರ್ಜುನ್ ಜನ್ಯ ಚಿಕಿತ್ಸೆ ನಂತರ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ಅವರು ದಿಢೀರ್ ಅಂತ ಸೋಶಿಯಲ್ ಮೀಡಿಯಾದಲ್ಲಿ ಪ್ರತ್ಯಕ್ಷರಾಗಿದ್ದು, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬಕ್ಕೆ ವಿಡಿಯೋ ಮೂಲಕ ಶುಭಾಶಯ ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ಆತಂಕದಲ್ಲಿದ್ದ ಅರ್ಜುನ್ ಜನ್ಯಾಭಿಮಾನಿಗಳು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ. ಅಲ್ಲದೇ ಮನೆಯಲ್ಲೇ ವಿಶ್ರಾಂತಿ ಪಡೆದುಕೊಳ್ಳುತ್ತಿರುವ ಅವರು ಮರೆಯದೆ ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿರೋದಕ್ಕೆ ಅಪ್ಪು ಅಭಿಮಾನಿಗಳು ಫುಲ್ ಫಿದಾ ಆಗಿದ್ದು, ದೊಡ್ಮನೆ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.