ಬೆಂಗಳೂರು:ಐಟಿ ಇಲಾಖೆಯ ಬೋರ್ಡ್ಗೆ ಮಸಿ ಬಳಿಯಲು ಮುಂದಾದ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಐಟಿ ಕಚೇರಿಗೆ ಮಸಿ ಬಳಿಯಲು ಯತ್ನ: ನಾಲ್ವರು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ - ಕಾರ್ಯಕರ್ತ
ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮುಗಿದ ಬಳಿಕ ಐಟಿ ಕಚೇರಿ ಬಳಿ ತೆರಳುವಾಗ ಮಸಿ ಬಳಿಯಲು ಮುಂದಾಗಿದ್ದರು.
ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಜೆಡಿಎಸ್ ಮುಖಂಡರ ನಿವಾಸಗಳ ಮೇಲೆ ದಾಳಿ ಖಂಡಿಸಿದ ಹಿನ್ನೆಲೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮುಗಿದ ಬಳಿಕ ಐಟಿ ಕಚೇರಿ ಬಳಿ ತೆರಳುವಾಗ ಮಸಿ ಬಳಿಯಲು ಮುಂದಾಗಿದ್ದಾರೆ.
ಈ ವೇಳೆ ಪೊಲೀಸರು ತಡೆದರೂ ಅವರು ಕೇಳಲಿಲ್ಲ. ಹೀಗಾಗಿ ಇದನ್ನು ತಡೆಯಲು ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.