ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಭರ್ಜರಿ ಬೇಟೆ: 15 ಕೆಜಿ ಗಾಂಜಾ ವಶ, ಓರ್ವನ ಬಂಧನ - ಪೋಲಿಸ್ ಠಾಣಾ
ಬಸ್ ನಿಲ್ದಾಣದ ಹತ್ತಿರ ಒರಿಸ್ಸಾ ರಾಜ್ಯದಿಂದ ಕರ್ನಾಟಕ ರಾಜ್ಯಕ್ಕೆ ಗಾಂಜಾ ತಂದು ಮಾರಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಆರೋಪಿ ಅಂದರ್
ಕಾಡುಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿನ ಬಸ್ ನಿಲ್ದಾಣದ ಹತ್ತಿರ ಒರಿಸ್ಸಾ ರಾಜ್ಯದಿಂದ ಕರ್ನಾಟಕ ರಾಜ್ಯಕ್ಕೆ ಗಾಂಜಾ ತಂದು ಮಾರಟ ಮಾಡುತ್ತಿದ್ದಾರೆ ಎಂಬ ಮಾಹಿತಿಕೇಂದ್ರ ಅಪರಾಧ ವಿಭಾಗಕ್ಕೆ ಬಂದಿತ್ತು. ಈ ಹಿನ್ನೆಲೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು ದಾಳಿ ನಡೆಸಿ 15 ಕೆಜಿ ಗಾಂಜಾ, ಒಂದು ಮೊಬೈಲ್ ವಶಪಡಿಸಿದ್ದಾರೆ.
ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.