ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ಕು ಕಡೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ: ನಾಲ್ವರನ್ನು ಬಂಧಿಸಿದ ಸಿಸಿಬಿ - cricket betting in Bangalore news
ಆರೋಪಿಗಳು ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಕೆ.ಆರ್.ಪುರ, ವೈಟ್ ಫೀಲ್ಡ್ ಸೇರಿದಂತೆ ನಾಲ್ಕು ಕಡೆಗಳಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದರು.
ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ
ಅ.14 ರಂದು ನಡೆದ ರಾಜಸ್ತಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯಾವಳಿ ವೇಳೆ ತಂಡದ ಸೋಲು ಹಾಗೂ ಗೆಲುವಿನ ಬಗ್ಗೆ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಕೆ.ಆರ್.ಪುರ, ವೈಟ್ ಫೀಲ್ಡ್ ಸೇರಿದಂತೆ ನಾಲ್ಕು ಕಡೆಗಳಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಗಿರೀಶ್, ನಾಗೇಂದ್ರ, ಬಲರಾಮ್ ಸೇರಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 21 ಲಕ್ಷ ರೂ ಹಣ ವಶಕ್ಕೆ ಪಡೆದುಕೊಂಡಿದ್ದು, ಕೆ.ಆರ್.ಪುರ ಮತ್ತು ವೈಟ್ ಫೀಲ್ಡ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.