ಬೆಂಗಳೂರು: ಲಾಕ್ ಡೌನ್ ವೇಳೆ ಅನಧಿಕೃತವಾಗಿ ನಡೆಯುತ್ತಿದ್ದ ಹುಕ್ಕಾ ಬಾರ್ ಮೇಲೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.
ಲಾಕ್ ಡೌನ್ ಆದೇಶ ಇದ್ದರೂ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಮಾಲಿಕ ಹಾಗೂ ಮ್ಯಾನೇಜರ್ ಸೇರಿದಂತೆ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.