ಕರ್ನಾಟಕ

karnataka

ETV Bharat / state

ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಮೂವರು ಆರೋಪಿಗಳ ಬಂಧನ

ಚಂದ್ರಾಲೇಔಟ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ ಬ್ರಿಜೇಶ್ ಮ್ಯಾಥ್ಯು ಮತ್ತು ಸಿಬ್ಬಂದಿ ತಂಡ ಸದ್ಯ ಪ್ರಕರಣದ ಸಂಬಂಧ 3 ಜನ ಆರೋಪಿಗಳನ್ನು ಪತ್ತೆ ಹಚ್ಚಿ ವಿಚಾರಣೆಗೊಳಪಡಿಸಿದಾಗ, ಕಳವು ಮಾಡಿದ ದ್ವಿಚಕ್ರ ವಾಹನದಲ್ಲಿ ಚಿನ್ನದ ಸರ, ಮೊಬೈಲ್‌ ಫೋನ್‌ಗಳನ್ನು ಸುಲಿಗೆ ಮಾಡಿರುವುದಾಗಿ ಮಾಹಿತಿ ನೀಡಿದ್ದರು..

ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಮೂವರು ಆರೋಪಿಗಳ ಬಂಧನ
ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಮೂವರು ಆರೋಪಿಗಳ ಬಂಧನ

By

Published : Aug 17, 2021, 7:34 PM IST

ಬೆಂಗಳೂರು: ಬೆಳ್ಳಂಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.

ರಾಜಧಾನಿಯ ಚಂದ್ರಾಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಸರಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮನೆಮುಂದೆ ವಾಕಿಂಗ್ ಹೋಗುತ್ತಿದ್ದಾಗ ಮಹಿಳೆಯ ಸರ ಕಿತ್ತುಕೊಂಡು ಹೋಗಿದ್ದ ಆರೋಪಿಗಳಾದ ಗಜೇಂದ್ರ, ಕೃಷ್ಣ, ರವಿಕುಮಾರ್ ಎನ್ನುವವರನ್ನು ನಗರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ಖದೀಮರಿಂದ 3,34,000 ರೂ. ಮೌಲ್ಯದ 45 ಗ್ರಾಂ ತೂಕದ ಎರಡು ಚಿನ್ನದ ಸರ ವಿವಿಧ ಕಂಪನಿಯ 6 ಮೊಬೈಲ್ ಫೋನ್, 3 ದ್ವಿಚಕ್ರ ವಾಹನಗಳನ್ನು ಇಂದು ವಶಕ್ಕೆ ಪಡೆಯಲಾಗಿದೆ.

ಪ್ರಕರಣದ ಬಗೆಗೆ ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿ, ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಂಜೀವ್ ಪಾಟೀಲ್ ಪ್ರಕರಣದ ಬಗೆಗೆ ಮಾಹಿತಿ ಹೊಂಚಿಕೊಂಡಿದ್ದಾರೆ. ನಗರದ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಲೈ 31ರ ರಾತ್ರಿ, ದೂರುದಾರರು ತಮ್ಮ ಮನೆಯ ಮುಂದಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.

ಆಗ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿ ಕುತ್ತಿಗೆಯಲ್ಲಿದ್ದ 15 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿದ್ದ. ಈ ಕುರಿತು ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ 392ರ ಅಡಿ ಪ್ರಕರಣ ದಾಖಲು ಮಾಡಿಕೊಂಡು, ಪೊಲೀಸರು ತನಿಖೆ ಕೈಗೊಂಡಿದ್ದರು ಎಂದು ಹೇಳಿದರು.

ಚಂದ್ರಾಲೇಔಟ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ ಬ್ರಿಜೇಶ್ ಮ್ಯಾಥ್ಯು ಮತ್ತು ಸಿಬ್ಬಂದಿ ತಂಡ ಸದ್ಯ ಪ್ರಕರಣದ ಸಂಬಂಧ 3 ಜನ ಆರೋಪಿಗಳನ್ನು ಪತ್ತೆ ಹಚ್ಚಿ ವಿಚಾರಣೆಗೊಳಪಡಿಸಿದಾಗ, ಕಳವು ಮಾಡಿದ ದ್ವಿಚಕ್ರ ವಾಹನದಲ್ಲಿ ಚಿನ್ನದ ಸರ, ಮೊಬೈಲ್‌ ಫೋನ್‌ಗಳನ್ನು ಸುಲಿಗೆ ಮಾಡಿರುವುದಾಗಿ ಮಾಹಿತಿ ನೀಡಿದ್ದರು ಎಂದು ತಿಳಿಸಿದರು.

ಈ ಹಿನ್ನೆಲೆ ಆರೋಪಿಗಳಿಂದ ಸುಮಾರು 3,34,000 ರೂ. ಬೆಲೆ ಬಾಳುವ 45 ಗ್ರಾಂ ತೂಕದ 2 ಚಿನ್ನದ ಸರಗಳು, ವಿವಿಧ ಕಂಪನಿಯ 6 ಮೊಬೈಲ್ ಫೋನ್‌ಗಳು, 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ABOUT THE AUTHOR

...view details