ಕರ್ನಾಟಕ

karnataka

ETV Bharat / state

ಕಳ್ಳತನ ಮಾಡ್ತಿದ್ದ ಇಬ್ಬರು ಖದೀಮರ ಬಂಧನ: ₹ 7 ಲಕ್ಷ ಮೌಲ್ಯದ ಚಿನ್ನಾಭರಣ ವಶ - ಬೆಂಗಳೂರು ಇತ್ತೀಚಿನ ಸುದ್ದಿ

ಬ್ಯಾಡರಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಕಬ್ಬಾಳಮ್ಮ ದೇವಸ್ಥಾನದ ಬಳಿಯ ಮನೆಯಲ್ಲಿ 2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಂದ್ರಹಳ್ಳಿಯ ಭರತ್ (28), ಅರ್ಜುನ್ (29) ರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 7.26 ಲಕ್ಷ ರೂ ಮೌಲ್ಯದ 165 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಇಬ್ಬರು ಖದೀಮರ ಬಂಧನ
ಇಬ್ಬರು ಖದೀಮರ ಬಂಧನ

By

Published : Jun 28, 2021, 3:46 PM IST

ಬೆಂಗಳೂರು: ಕಳ್ಳತನವನ್ನೇ ಫುಲ್ ಟೈಮ್ ಜಾಬ್ ಮಾಡಿಕೊಂಡಿದ್ದ ಆರೋಪಿಗಳು ಅಂದರ್ ಆಗಿದ್ದು, ಎರಡು ಪ್ರತ್ಯೇಕ ಪ್ರಕರಣದಲ್ಲಿ 7 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬ್ಯಾಡರಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಕಬ್ಬಾಳಮ್ಮ ದೇವಸ್ಥಾನದ ಬಳಿಯ ಮನೆಯಲ್ಲಿ 2 ಲಕ್ಷ ರೂ ಬೆಲೆ ಬಾಳುವ ಚಿನ್ನಾಭರಣ ಕದ್ದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಂದ್ರಹಳ್ಳಿಯ ಭರತ್ (28), ಅರ್ಜುನ್ (29) ರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 7.26 ಲಕ್ಷ ರೂ ಮೌಲ್ಯದ 165 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳಿಂದ ವಶಪಡಿಸಿಕೊಂಡಿರುವ ಚಿನ್ನಾಭರಣ

ಡಿಸಿಪಿ ಸಂದೀಪ್ ಪಾಟೀಲ್​ರಿಂದ ಮಾಹಿತಿ

ಜೂನ್ 4 ರಂದು ಬ್ಯಾಡರಹಳ್ಳಿಯ ಕಬ್ಬಾಳಮ್ಮ ದೇಗುಲದ ಬಳಿಯ ಮನೆಯೊಂದರಲ್ಲಿ ಕಳ್ಳತನವಾಗಿದೆ ಎಂದು ದೂರು ದಾಖಲಾಗಿತ್ತು. ಕಲಂ 380 ಐಪಿಸಿ ಪ್ರಕಾರ ಪ್ರಕರಣ ದಾಖಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು ಎಂದು ಡಿಸಿಪಿ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಕಿಡ್ನಾಪ್​, ಕಾಡಿನಲ್ಲಿ ಒತ್ತೆಯಾಳು, 3 ತಿಂಗಳು ಗ್ಯಾಂಗ್​ ರೇಪ್​.. ಅತ್ಯಾಚಾರ ಸಂತ್ರಸ್ತೆಯ ಕಣ್ಣೀರ ಕಥೆ

ABOUT THE AUTHOR

...view details