ಬೆಂಗಳೂರು: ಬೈಕ್ ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ಇಬ್ಬರು ಖತರ್ನಾಕ್ ಖದೀಮರನ್ನು ತಿಲಕ್ ನಗರ ಪೊಲೀಸರು ಬಂಧಿಸಿದ್ದಾರೆ. ಗುರಪ್ಪನಪಾಳ್ಯ ನಿವಾಸಿಗಳಾದ ಅರ್ಬಾನ್ ಖಾನ್ ಆಲಿಯಾಸ್ ಶಕ್ತಿಮಾನ್ ಹಾಗೂ ಮೊಹಮ್ಮದ್ ಆನೀಸ್ ಬಂಧಿತ ಆರೋಪಿಗಳು.
ಇತ್ತೀಚೆಗೆ ತಿಲಕ್ ನಗರದಲ್ಲಿ ಬೈಕ್ ಹ್ಯಾಂಡಲ್ ಮುರಿದು ಕಳ್ಳತನ ಮಾಡುವ ಹಾವಳಿ ಹೆಚ್ಚಾಗಿತ್ತು. ಈ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿ 13 ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳ ಪೈಕಿ ಅರ್ಬಾನ್ ವಿರುದ್ಧ ಈ ಹಿಂದೆ ತಿಲಕ್ ನಗರ, ಕಾಮಾಕ್ಷಿಪಾಳ್ಯ, ಸುದ್ದು ಗುಂಟೆಪಾಳ್ಯ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.