ಬೆಂಗಳೂರು: ಬೀದಿ ನಾಯಿಗಳಿಗೆ ಆಹಾರದಲ್ಲಿ ವಿಷ ಹಾಕಿ ಸಾಯಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ವಿಷದ ಆಹಾರ ಸೇವಿಸಿ ಬೀದಿ ನಾಯಿಗಳ ಸಾವು ಪ್ರಕರಣ: ಆರೋಪಿ ಅರೆಸ್ಟ್ - Arrested man for killing dogs
ಬೀದಿ ನಾಯಿಗಳಿಗೆ ಆಹಾರದಲ್ಲಿ ವಿಷ ಹಾಕಿ ಸಾಯಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಜೋಸೆಫ್ ಫ್ರಾನ್ಸಿಸ್ ಬಂಧಿತ ಆರೋಪಿಯಾಗಿದ್ದು, ಪುಟ್ಟೇನಹಳ್ಳಿಯ ಅನಾಥಾಶ್ರಮವೊಂದರ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಜನವರಿ 27ರಂದು ಅನಾಥಾಶ್ರಮದಲ್ಲಿ ಉಳಿದ ಆಹಾರವನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದನಂತೆ. ಇದೇ ಊಟವನ್ನು ಸೇವಿಸಿ ಆರು ನಾಯಿಗಳು ಸ್ಥಳದಲ್ಲೇ ಸಾವನ್ನಪ್ಪಿದರೆ, ನಾಲ್ಕು ನಾಯಿಗಳು ಅಸ್ವಸ್ಥವಾಗಿದ್ದವು.
ಇನ್ನು ಈ ಸಂಬಂಧ ಸ್ಥಳೀಯರೊಬ್ಬರು ನೀಡಿದ ದೂರಿನ ಮೇರೆಗೆ ಪುಟ್ಟೇನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ನಾಯಿಗಳಿಗೆ ಆಹಾರ ಹಾಕಿದ್ದು ನಿಜ. ಆದರೆ ಊಟದಲ್ಲಿ ವಿಷ ಹಾಕಿಲ್ಲ ಎಂದು ಪೊಲೀಸರ ವಿಚಾರಣೆಯಲ್ಲಿ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ. ಇನ್ನು ವಿಷ ಸೇವಿಸಿದ ಆಹಾರ ಮಾದರಿಯನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿದೆ. ಇನ್ನು ವರದಿ ಬಂದ ಬಳಿಕ ಸಂಪೂರ್ಣ ಮಾಹಿತಿ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.