ಬೆಂಗಳೂರು: ವನ್ಯಜೀವಿಗಳನ್ನು ಬೇಟೆಯಾಡಿ ಅವುಗಳ ಚರ್ಮ ಸೇರಿದಂತೆ ಕಳೇಬರ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜಿಂಕೆ ಚರ್ಮ, ಕೊಂಬು ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್
ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ತಮಿಳುನಾಡು ಮೂಲದ ಪ್ರಭು ಎಂಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
ತಮಿಳುನಾಡು ಮೂಲದ ಪ್ರಭು ಬಂಧಿತ ಆರೋಪಿ. ಇದೇ ತಿಂಗಳ 23ರಂದು ಜಾಲಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ಆರೋಪಿ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಬಂಧಿತನಿಂದ 3 ಜಿಂಕೆ ಚರ್ಮ ವಶಪಡಿಸಿಕೊಳ್ಳಲಾಗಿದೆ. ಆರೋಪಿ ನೀಡಿದ ಮಾಹಿತಿ ಆಧಾರಿಸಿ ತಮಿಳುನಾಡಿನಲ್ಲಿರುವ ಆತನ ಮನೆಯಲ್ಲಿ ಅಡಗಿಸಿಟ್ಟಿದ್ದ 3 ಜಿಂಕೆ ಚರ್ಮ, ತಲೆ ಬುರುಡೆ ಹಾಗೂ ಮೂಳೆ ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.