ಬೆಂಗಳೂರು :ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಮುಖ್ಯಮಂತ್ತಿ ಯಡಿಯೂರಪ್ಪ ಇಂದು ದೆಹಲಿಗೆ ತೆರಳಲಿದ್ದಾರೆ.
ಇಂದು ಅರುಣ್ ಜೇಟ್ಲಿ ಅಂತ್ಯ ಸಂಸ್ಕಾರ.. ದೆಹಲಿಗೆ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ.. - ಅರುಣ್ ಜೇಟ್ಲಿ
ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಮುಖ್ಯಮಂತ್ತಿ ಯಡಿಯೂರಪ್ಪನವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ದೆಹಲಿಗೆ ಸಿಎಂ ಬಿಎಸ್ವೈ
ಬೆಳಗ್ಗೆ 9.45ಕ್ಕೆ ಬೆಂಗಳೂರಿನಿಂದ ಹೊರಟು 12.35ಕ್ಕೆ ದೆಹಲಿ ತಲುಪಲಿರುವ ಮುಖ್ಯಮಂತ್ರಿಗಳು ಇಂದೇ ರಾತ್ರಿ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಯಡಿಯೂರಪ್ಪನವರು ಅರುಣ್ ಜೇಟ್ಲಿಯವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಜೇಟ್ಲಿಯವರು ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದ ಸಂದರ್ಭದಲ್ಲಿ ಅವರು ನೀಡಿದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಬಿಜೆಪಿಯನ್ನು ಹೆಚ್ಚು ಬಲಗೊಳಿಸಿದ್ದರು. ರಾಜ್ಯ ಬಿಜೆಪಿಯಲ್ಲಿ ಕೆಲವೊಮ್ಮೆ ಆಂತರಿಕ ಸಮಸ್ಯೆಗಳು ಎದುರಾದಾಗ ಅದಕ್ಕೆ ಹಲವು ಬಾರಿ ಜೇಟ್ಲಿ ಅವರ ಸಲಹೆ ಪಡೆದು ಪರಿಸ್ಥಿತಿ ನಿಭಾಯಿಸುತ್ತಿದ್ದರು.