ಬೆಂಗಳೂರು: ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜೂ.16 ಕ್ಕೆ ಆಗಮಿಸಲಿದ್ದು, ಅಂದು ಸಂಜೆ 5 ಗಂಟೆಗೆ ಅವರು ಸಚಿವರ ಸಭೆ ಕರೆದಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ವಿಕಾಸ ಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಆ ಸಭೆಗೆ ಬರಲು ಹೇಳಿದ್ದಾರೆ. ಅಲ್ಲಿ ಏನೇನು ಚರ್ಚೆಯಾಗುತ್ತೋ ಗೊತ್ತಿಲ್ಲ ಎಂದರು.