ಕರ್ನಾಟಕ

karnataka

ETV Bharat / state

ಬಿಜೆಪಿ ಮುಖ್ಯ ಕಚೇರಿಗೆ ಭೇಟಿ ನೀಡಿದ ಅರುಣ್ ಸಿಂಗ್‌ಗೆ ಅದ್ದೂರಿ ಸ್ವಾಗತ

ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಲ್ಲೇಶ್ವರಂನಲ್ಲಿರುವ ಪಕ್ಷದ ಮುಖ್ಯ ಕಚೇರಿಯಾದ ಜಗನ್ನಾಥ ಭವನಕ್ಕೆ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್ ಭೇಟಿ ನೀಡಿದರು.

Arun Singh, who first visited the BJP office
ಬಿಜೆಪಿ ಕಚೇರಿಗೆ ಮೊದಲ ಬಾರಿಗೆ ಭೇಟಿ ನೀಡಿದ ಅರುಣ್ ಸಿಂಗ್

By

Published : Dec 6, 2020, 3:17 PM IST

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಅರುಣ್ ಸಿಂಗ್ ಮೊದಲ ಬಾರಿಗೆ ಪಕ್ಷದ ಮುಖ್ಯ ಕಚೇರಿಯಾದ ಜಗನ್ನಾಥ ಭವನಕ್ಕೆ ಭೇಟಿ ನೀಡಿದರು. ಈ ವೇಳೆ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ನಾಯಕರು ಹಾಗು ಕಾರ್ಯಕರ್ತರು ಅದ್ದೂರಿಯಾಗಿ ಪೂರ್ಣ ಕುಂಭ ಸ್ವಾಗತ ಕೋರಿದರು.

ಬಿಜೆಪಿ ಕಚೇರಿಗೆ ಮೊದಲ ಬಾರಿಗೆ ಆಗಮಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​ ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು.
ಇದಕ್ಕೂ ಮೊದಲು ಬೆಳಗ್ಗೆ ಗೋವಿಂದರಾಜನಗರದಲ್ಲಿ ವಿ. ಸೋಮಣ್ಣ ಅವರ ಕಚೇರಿ ಉದ್ಘಾಟನೆಯಲ್ಲಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ್​, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಗೋಪಾಲಯ್ಯ, ಹಾರ-ಶಾಲು, ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು.

ಓದಿ:ಕುಮಾರಸ್ವಾಮಿ ಲೂಸ್ ಟಾಕ್ ಕಡೆಗಣಿಸಲು ತೀರ್ಮಾನ: ಹೆಚ್​ಡಿಕೆ ಅಸ್ತ್ರಕ್ಕೆ ಕಾಂಗ್ರೆಸ್​ ಪ್ರತ್ಯಸ್ತ್ರ ತಂತ್ರ

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಹಾಗು ಭಾರತ ಮಾತೆಯ ಭಾವಚಿತ್ರಕ್ಕೆ ಸಿಂಗ್‌ ಪುಷ್ಪಾರ್ಚನೆ ಮಾಡಿದರು. ಬಳಿಕ ರಾಜ್ಯ ಬಿಜೆಪಿ ಮುಖಂಡರ ಸಭೆ ನಡೆಸಿದರು. ಸಚಿವರಾದ ಸುರೇಶ್ ಕುಮಾರ್, ಭೈರತಿ ಬಸವರಾಜ್, ಸಂಸದರಾದ ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ ಮುಂತಾದವರು ಸಿಂಗ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.

ABOUT THE AUTHOR

...view details