ಬೆಂಗಳೂರು: ಇಂದು ಆರ್ಯ ವೈಶ್ಯ ಅಭಿವೃದ್ಧಿ ನಿಗಮ ಸ್ಥಾಪನೆಗೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಥಮ ವರ್ಷದ ಸಾಧನೆಗಳ ಪರಿಸರ ಸ್ನೇಹಿ ಕೈಪಿಡಿ ಹಾಗೂ ಕರಪತ್ರಗಳನ್ನು ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಕ್ತಿಭವನದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು.
ಆರ್ಯ ವೈಶ್ಯ ಅಭಿವೃದ್ಧಿ ನಿಗಮಕ್ಕೆ ವರ್ಷ: ಪರಿಸರ ಸ್ನೇಹಿ ಕೈಪಿಡಿ ಬಿಡುಗಡೆ ಮಾಡಿದ ಸಿಎಂ...!
ಇಂದು ಆರ್ಯ ವೈಶ್ಯ ಅಭಿವೃದ್ಧಿ ನಿಗಮ ಸ್ಥಾಪನೆಗೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಥಮ ವರ್ಷದ ಸಾಧನೆಗಳ ಪರಿಸರ ಸ್ನೇಹಿ ಕೈಪಿಡಿ ಹಾಗೂ ಕರಪತ್ರಗಳನ್ನು ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಕ್ತಿಭವನದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಿಡುಗಡೆ ಮಾಡಿದರು.
ನಿಗಮಕ್ಕೆ ಶುಭ ಹಾರೈಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಪ್ರಥಮ ಬಾರಿಗೆ ಬೀಜದ ಕಾಗದವನ್ನು ಬಳಸಿ ಕರಪತ್ರಗಳನ್ನು ಮುದ್ರಿಸಿರುವುದು ಉತ್ತಮ ನಡೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಮರುಬಳಕೆಯ ಪರಿಸರ ಸ್ನೇಹಿ ಕರಪತ್ರ ಮತ್ತು ಕೈಪಿಡಿಗಳನ್ನು ಮುದ್ರಣ ಮಾಡಲು ಸರ್ಕಾರ ಪ್ರೋತ್ಸಾಹ ನೀಡುತ್ತದೆ. ಕಾಗದದಲ್ಲಿ ತುಳಸಿ, ಮಲ್ಲಿಗೆ, ಚೆಂಡು ಹೂವಿನ ಬೀಜಗಳನ್ನು ಹೊಂದಿದ್ದು, ಬಳಸಿದ ನಂತರ ಇದನ್ನು ನೆಡ ಬಹುದಾಗಿದೆ ಎಂದರು. ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್ ಅರುಣ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮೊಹಮ್ಮದ್ ಮೊಹಶೀನ್, ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು.