ಬೆಂಗಳೂರು: ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ ಏರ್ಪಡಿಸಿದ್ದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಜಾಗತೀಕರಣದ ಯುಗದಲ್ಲಿ ಶೈಕ್ಷಣಿಕ ಉನ್ನತಿ ಸಾಧಿಸುವವರು ಮಾತ್ರ ಉಜ್ವಲ ಅವಕಾಶಗಳನ್ನು ಪಡೆಯುತ್ತಾರೆ. ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟ ಮತ್ತು ಉತ್ಕೃಷ್ಟತೆಗಳು ಮಾತ್ರ ನಿಜವಾದ ಶಕ್ತಿಗಳಾಗಿವೆ ಎಂದು ಹೇಳಿದರು.
ಸಮಾಜದ ಎಲ್ಲಾ ಸಮುದಾಯಗಳ ಸಮಾನ ಅಭಿವೃದ್ಧಿ ಸಾಧ್ಯವಾಗಬೇಕು ಎನ್ನುವ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದಾರೆ. ಇದರ ಅನುಷ್ಠಾನದಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದೆ ಎಂದರು.