ಕರ್ನಾಟಕ

karnataka

ETV Bharat / state

ಬೆಂಗಳೂರಿನಲ್ಲಿ ಮೇ 25ರವರೆಗೆ 34,541 ಅನಧಿಕೃತ ಜಾಹೀರಾತು ಫಲಕ ತೆರವು: ಬಿಬಿಎಂಪಿಯಿಂದ ಹೈಕೋರ್ಟ್​ಗೆ ಮಾಹಿತಿ..

2023ರ ಮಾರ್ಚ್ ನಿಂದ ಮೇ 25ರವರೆಗೆ ನಗರದ ಎಂಟು ವಲಯಗಳಲ್ಲಿ ಅಳವಡಿಸಲಾಗಿದ್ದ ಒಟ್ಟು 35,137 ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತು ಇತರ ಜಾಹೀರಾತುಗಳನ್ನು ಗುರುತಿಸಲಾಗಿದೆ. ಆ ಪೈಕಿ 34,541 ಅನ್ನು ತೆರವುಗೊಳಿಸಲಾಗಿದೆ. ಅನಧಿಕೃತ ಜಾಹೀರಾತು ಅಳವಡಿಕೆ ಸಂಬಂಧ ಒಟ್ಟು 37 ದೂರುಗಳು ಸಲ್ಲಿಕೆಯಾಗಿದ್ದವು. ಈ ಸಂಬಂಧ 40 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅನುಪಾಲನಾ ವರದಿಯಲ್ಲಿ ತಿಳಿಸಲಾಗಿದೆ.

High Court
ಹೈಕೋರ್ಟ್

By

Published : May 30, 2023, 10:14 PM IST

ಬೆಂಗಳೂರು:ರಾಜಧಾನಿ ಬೆಂಗಳೂರು ನಗರದಲ್ಲಿ ಕಳೆದ ಮಾರ್ಚ್‌ನಿಂದ ಮೇ 25ರವರೆಗೆ ಅಳವಡಿಸಲಾಗಿದ್ದ ಒಟ್ಟು 35,137 ಅನಧಿಕೃತ ಜಾಹೀರಾತು ಫಲಕಗಳನ್ನು ಗುರುತಿಸಲಾಗಿದ್ದು, ಅವುಗಳ ಪೈಕಿ 34,541 ಅನ್ನು ತೆರವುಗೊಳಿಸಿರುವುದಾಗಿ ಹೈಕೋರ್ಟ್​ಗೆ ಬಿಬಿಎಂಪಿ ಮಾಹಿತಿ ನೀಡಿದೆ. ನಗರದಲ್ಲಿ ಅಳವಡಿಸಿರುವ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಮಾಯಿಗೆ ಗೌಡ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜೆಎಸ್​ ಕಮಲ್​ ಅವರಿದ್ದ ನ್ಯಾಯಪೀಠಕ್ಕೆ ಬಿಬಿಎಂಪಿ ಮಾಹಿತಿ ನೀಡಿದೆ.

40 ಎಫ್‌ಐಆರ್‌ ದಾಖಲಾಗಿದ್ದವು:ಆದರೆ, ಹೈಕೋರ್ಟ್ ಈ ಹಿಂದೆ ನೀಡಿದ್ದ ನಿರ್ದೇಶನದ ಅನ್ವಯ ನಗರದಲ್ಲಿ ಜಾಹೀರಾತು ಅಳವಡಿಕೆ ತಡೆಯುವ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಶ್ರೀಧರ್ ಮೂರ್ತಿ ಅನುಪಾಲನಾ ವರದಿ ಸಲ್ಲಿಸಿದ್ದಾರೆ.
2023ರ ಮಾರ್ಚ್ ನಿಂದ ಮೇ 25ರವರೆಗೆ ನಗರದ ಎಂಟು ವಲಯಗಳಲ್ಲಿ ಅಳವಡಿಸಲಾಗಿದ್ದ ಒಟ್ಟು 35,137 ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತು ಇತರೆ ಜಾಹೀರಾತುಗಳನ್ನು ಗುರುತಿಸಲಾಗಿದೆ. ಆ ಪೈಕಿ 34,541 ಅನ್ನು ತೆರವುಗೊಳಿಸಲಾಗಿದೆ. ಅನಧಿಕೃತ ಜಾಹೀರಾತು ಅಳವಡಿಕೆ ಸಂಬಂಧ ಒಟ್ಟು 37 ದೂರುಗಳು ಸಲ್ಲಿಕೆಯಾಗಿದ್ದವು. ಈ ಸಂಬಂಧ 40 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅನುಪಾಲನಾ ವರದಿಯಲ್ಲಿ ತಿಳಿಸಲಾಗಿದೆ.

ಜೊತೆಗೆ, ತೆರವುಗೊಳಿಸಲಾಗಿರುವ ಹೋರ್ಡಿಂಗ್ಸ್, ಫ್ಲೆಕ್ಸ್ ಅಥವಾ ಬ್ಯಾನರ್‌ಗಳನ್ನು ವಾರ್ಡ್ ಕಚೇರಿಗಳಲ್ಲಿ ಸಂಗ್ರಹಿಸಿ ಇಡಲಾಗಿದೆ. ಜಾಹೀರಾತು ಫಲಕಗಳಿಗೆ ಬಳಕೆ ಮಾಡಲಾದ ಮರದ ಕಟ್ಟಿಗೆ ಹಾಗೂ ಇತರೆ ವಸ್ತುಗಳನ್ನು ಸುಡುವ ಮೂಲಕ ಸುಲಭವಾಗಿ ವಿಲೇವಾರಿ ಮಾಡಬಹುದು. ಆದರೆ, ಪಾಲಿಕೆಯ ಘನ ತ್ಯಾಜ್ಯ ನಿರ್ವಹಣೆ ವಿಭಾಗದ ಜೊತೆಗೆ ಸಮಾಲೋಚನೆ ನಡೆಸಿ ಜಾಹೀರಾತುಗಳಿಗೆ ಬಳಸಿದ ಪ್ಲಾಸ್ಟಿಕ್ ವಸ್ತುಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲಾಗುವುದು. ಅನಧಿಕೃತ ಜಾಹೀರಾತು ಅಳವಡಿಕೆ ಸಂಬಂಧ ಸಾರ್ವಜನಿಕರು ದೂರು ಸಲ್ಲಿಸಲು ಅನುಕೂಲವಾಗುವಂತೆ ವಾರ್ಡ್‌ವಾರು ಸಂಬಂಧಪಟ್ಟ ಅಧಿಕಾರಿ ಹೆಸರು ಹಾಗೂ ಫೋನ್ ನಂಬರ್ ಅನ್ನು ಪಾಲಿಕೆಯ ವೆಬ್‌ಸೈಟ್ ಮತ್ತು ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದೆ ಎಂದು ಅನುಪಾಲನವಾ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ಮಗಳ ಕಿಡ್ನಾಪ್​: ರೈಲಿಗೆ ತಲೆ ಕೊಟ್ಟ ತಂದೆ - ತಾಯಿ.. ಆರೋಪಿಯ ಮನೆ ಮುಂದೆ ಶವ ಸುಟ್ಟ ಸಂಬಂಧಿಕರು!

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಾಹೀರಾತು ಹೋರ್ಡಿಂಗ್, ಫ್ಲೆಕ್ಸ್ ಅಥವಾ ಬ್ಯಾನರ್‌ಗಳನ್ನು ಅಳವಡಿಸುವುದನ್ನು ಕೇಂದ್ರ ಚುನಾವಣಾ ಆಯೋಗವು ನಿಷೇಧ ಮಾಡಿದ ಹೊರತಾಗಿಯೂ ರಾಜಕೀಯ ಪಕ್ಷಗಳು ಮತ್ತು ಅವುಗಳ ಬೆಂಬಲಿಗರು ಜಾಹೀರಾತು ಫಲಕಗಳನ್ನು ಅನಧಿಕೃತವಾಗಿ ಅಳವಡಿಕೆ ಮಾಡಿದ್ದಾರೆ. ಈ ಉಪದ್ರವನ್ನು ತಡೆಯಲು ಬಿಬಿಎಂಪಿ ಅಧಿಕಾರಿಗಳು ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ. ಬಹುತೇಕ ಎಲ್ಲಾ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ಮಾರು ವೇಷದಲ್ಲಿ ಬಂದು ಅತ್ತೆ ಕೊಂದ ಸೊಸೆ: ಅಪರಾಧಿ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿ

ABOUT THE AUTHOR

...view details