ಕರ್ನಾಟಕ

karnataka

ETV Bharat / state

ಕಾನೂನು ಪ್ರಕಾರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಪ್ರತಿಷ್ಠಾಪಿಸಲು ಕ್ರಮ: ರಮೇಶ್​ ಜಾರಕಿಹೊಳಿ - ಸಂಗೊಳ್ಳಿ ರಾಯಣ್ಣ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣದ ವಿಚಾರವಾಗಿ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ಈ ವಿಚಾರವಾಗಿ ಎಲ್ಲರೊಂದಿಗೆ ಚರ್ಚಿಸಿ, ಕಾನೂನು ಪ್ರಕಾರ ಪುತ್ಥಳಿ ಪ್ರತಿಷ್ಠಾಪಿಸುವುದಾಗಿ ಭರವಸೆ ನೀಡಿದ್ದಾರೆ.

Ramesh Jarakiholi
ರಮೇಶ್​ ಜಾರಕಿಹೊಳಿ ಹೇಳಿಕೆ

By

Published : Aug 27, 2020, 3:06 PM IST

ಬೆಳಗಾವಿ: ನಾನೋರ್ವ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯಾಗಿ ಕಾನೂನು ಉಲ್ಲಂಘಿಸುವುದು ಸರಿಯಲ್ಲ. ಆದ್ದರಿಂದ ಕಾನೂನು ಪ್ರಕಾರವೇ ಸಂಗೊಳ್ಳಿ ರಾಯಣ್ಣ ಪುತ್ಥಳಿ ಪ್ರತಿಷ್ಠಾಪನೆ ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ರಾಯಣ್ಣ ಪುತ್ಥಳಿ ವಿವಾದ ಕುರಿತು ಸಚಿವ ರಮೇಶ್​ ಜಾರಕಿಹೊಳಿ ಪ್ರತಿಕ್ರಿಯೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುತ್ಥಳಿ ವಿವಾದ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಾಗಿನೆಲೆ ಸ್ವಾಮೀಜಿಯವರು ನನ್ನೊಂದಿಗೆ ಮಾತನಾಡಿದ್ದಾರೆ. ಈ ವಿಷಯದ ಬಗ್ಗೆ ಸರ್ವ ಪಕ್ಷದ ನಾಯಕರ ಜೊತೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಬೇಕಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ವಿಧಾನ ಪರಿಷತ್​ ಸದಸ್ಯ ಹೆಚ್.ವಿಶ್ವನಾಥ, ಮಾಜಿ ಸಚಿವ ರೇವಣ್ಣ ಹಾಗೂ ಸ್ಥಳೀಯ ನಾಯಕರ ಜೊತೆ ಮಾತನಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನಂತರ ಮುಂದಿನ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.

ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ ಕಾನೂನಿನ ಚೌಕಟ್ಟಿನಲ್ಲಿ ವಿವಾದ ಇತ್ಯರ್ಥಪಡಿಸುವ ಪ್ರಯತ್ನ ಮಾಡುತ್ತೇನೆ. ಕಾನೂನು ಪಂಡಿತರು ಹಾಗೂ ಜಿಲ್ಲಾಡಳಿತದ ಜೊತೆ ಚರ್ಚಿಸಿ ಮಾಹಿತಿ ಕಲೆಹಾಕುತ್ತೇನೆ. ಈ ಬಗ್ಗೆ ಇತರರೊಂದಿಗೆ ಚರ್ಚೆ ಮಾಡಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ರಮೇಶ್​ ಜಾರಕಿಹೊಳಿ ಭರವಸೆ ನೀಡಿದ್ದಾರೆ.

ABOUT THE AUTHOR

...view details