ಬೆಂಗಳೂರು: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಗೆ ಬಹುಅಂಗಾಂಗ ವೈಫಲ್ಯವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆ ನಿರ್ದೇಶಕ ಡಾ. ಮನೀಷ್ ರೈ ಸ್ಪಷ್ಟಪಡಿಸಿದ್ದಾರೆ.
ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ: ಮಣಿಪಾಲ್ ಆಸ್ಪತ್ರೆ ಸ್ಪಷ್ಟೀಕರಣ - Manipal hospital clarification
ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರು ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರಿಗೆ ಬಹುಅಂಗಾಂಗ ವೈಫಲ್ಯವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆ ನಿರ್ದೇಶಕ ಡಾ. ಮನೀಷ್ ರೈ ಸ್ಪಷ್ಟಪಡಿಸಿದ್ದಾರೆ.
![ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ: ಮಣಿಪಾಲ್ ಆಸ್ಪತ್ರೆ ಸ್ಪಷ್ಟೀಕರಣ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ](https://etvbharatimages.akamaized.net/etvbharat/prod-images/768-512-8837584-924-8837584-1600346670640.jpg)
ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ
ಕೋವಿಡ್-19 ಹಾಗೂ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾಗಿರುವ ಅಶೋಕ್ ಗಸ್ತಿ ಅವರಿಗೆ ಬಹು ಅಂಗಾಂಗ ವೈಫಲ್ಯವಾಗಿತ್ತು. ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ. ಜೀವ ರಕ್ಷಕ ಸಾಧನಗಳೊಂದಿಗೆ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಸ್ಪಷ್ಟೀಕರಣ ನೀಡಿದೆ.
ಮಣಿಪಾಲ್ ಆಸ್ಪತ್ರೆ
ಈಗಾಗಲೇ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ರಾಜ್ಯಸಭೆಯಲ್ಲೂ ಕೂಡ ಅಶೋಕ್ ಗಸ್ತಿ ನಿಧನರಾಗಿದ್ದಾರೆ ಎಂದು ಸಂತಾಪ ಸೂಚಿಸಲಾಗಿತ್ತು.
Last Updated : Sep 17, 2020, 10:18 PM IST