ಬೆಂಗಳೂರು: ಕ್ವಾರಂಟೈನ್ ನಿಯಮ ಪಾಲಿಸದ ಹಿನ್ನೆಲೆ ಡ್ರೋನ್ ಪ್ರತಾಪ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾಂಸ್ಥಿಕ ಕ್ವಾರಂಟೈನ್ ಮುಕ್ತಾಯ ಹಿನ್ನೆಲೆಯಲ್ಲಿ ಪೊಲೀಸರು ಪ್ರತಾಪ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾಧ್ಯಮವೊಂದಕ್ಕೆ ಸಂದರ್ಶನ ನೀಡುವ ಮೂಲಕ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ತಲಘಟ್ಟಪುರ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆ ಬಂಧನ ಭೀತಿಯಿಂದ ಪ್ರತಾಪ್ ಚಿಕ್ಕಮಗಳೂರು ಹಾಗೂ ಮೈಸೂರಿನಲ್ಲಿ ತಲೆಮರೆಸಿಕೊಂಡಿದ್ದ. ಬಳಿಕ ಆತನನ್ನು ಪತ್ತೆ ಹಚ್ಚಿ ರಿಚ್ಮಂಡ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ನಲ್ಲಿ 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಜೂನ್ 20 ರಂದು ಸಾಂಸ್ಥಿಕ ಕ್ವಾರಂಟೈನ್ ಅವಧಿಯಲ್ಲಿರುವಾಗಲೇ ವಕೀಲರನ್ನು ತನ್ನ ಹೊಟೇಲ್ಗೆ ಕರೆಸಿಕೊಂಡು ಒಂದು ಗಂಟೆ ಕಾಲ ಪ್ರತಾಪ್ ಮಾತನಾಡಿಸಿದ್ದ. ನಿಯಮ ಉಲ್ಲಂಘನೆ ಹಿನ್ನೆಲೆ ದೂರು ದಾಖಲಾಗಿತ್ತು. ಈಗ ಪ್ರತಾಪ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.