ಬೆಂಗಳೂರು : ಖಾಸಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಅಶ್ವಿನಿ ಪುನೀತ್ ರಾಜ್ಕುಮಾರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ ಜೊತೆಗಿದ್ದರು.
ಸಿಎಂ ಭೇಟಿಯಾದ ಅಶ್ವಿನಿ ಪುನೀತ್ ರಾಜಕುಮಾರ್; ಖಾಸಗಿ ಕಾರ್ಯಕ್ರಮಕ್ಕೆ ಆಹ್ವಾನ - ETV Bharat Karnataka
ಪುನೀತ್ ರಾಜಕುಮಾರ್ ಶಿಲ್ಪದ ಸಂಗ್ರಹದ ಅನಾವರಣ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಅಶ್ವಿನಿ ಪುನೀತ್ ರಾಜಕುಮಾರ್ ಆಹ್ವಾನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅಶ್ವಿನಿ ರಾಜಕುಮಾರ್
Published : Oct 8, 2023, 8:50 PM IST
ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರ ಶಿಲ್ಪದ ಸಂಗ್ರಹದ ಅನಾವರಣ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಸಿಎಂಗೆ ಆಹ್ವಾನ ನೀಡಿದರು. ನಗರದ ಖಾಸಗಿ ಹೊಟೇಲ್ನಲ್ಲಿ ಅ.16ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ :ಜಾತಿಗಣತಿ ವರದಿ ವಿಚಾರ ಇಟ್ಟುಕೊಂಡು ಸರ್ಕಾರ ರಾಜಕೀಯ ಮಾಡುತ್ತಿದೆ: ಹೆಚ್ ಡಿ ಕುಮಾರಸ್ವಾಮಿ