ಕರ್ನಾಟಕ

karnataka

ETV Bharat / state

ಬೆಂಗಳೂರಿನಲ್ಲಿ ಹಣಕ್ಕಾಗಿ ಅಡ್ಡಗಟ್ಟಿ ಹಲ್ಲೆ ಪ್ರಕರಣ: ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆ - ಉದ್ಯೋಗಿ ಮೇಲೆ ನಡೆದ ಹಲ್ಲೆ ಪ್ರಕರಣ

ನಗರದ ಉದ್ಯೋಗಿ ಗೌರವ್ ಅಗರವಾಲ್ ಎಂಬುವವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ದೊರೆತಿದೆ.

ಉದ್ಯೋಗಿ ಮೇಲೆ ನಡೆದ ಹಲ್ಲೆ ಪ್ರಕರಣ
Assault on employee case : CCTV footage found

By

Published : Jul 4, 2020, 12:02 PM IST

ಬೆಂಗಳೂರು: ಜೂನ್ 27ರಂದು ನಗರದ ಉದ್ಯೋಗಿ ಮೇಲೆ ದುಷ್ಕರ್ಮಿಗಳು ಹಣಕ್ಕಾಗಿ ಚಾಕುವಿನಿಂದ ಹಲ್ಲೆ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿ ದೊರೆತಿದೆ.

ಕೃತ್ಯದ ಸಿಸಿಟಿವಿ ದೃಶ್ಯ

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌರವ್ ಅಗರವಾಲ್ ಕೆಲಸ ಮುಗಿಸಿಕೊಂಡು ಸ್ನೇಹಿತರೊಂದಿಗೆ ಜೂನ್ 27ರ ಮಧ್ಯರಾತ್ರಿ ತಾವರೆಕೆರೆ ಮುಖ್ಯರಸ್ತೆ ಭುವನಪ್ಪ ಲೇಔಟ್ ಬಳಿ ಹೋಗುತ್ತಿದ್ದರು. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ಮೂವರು ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಹಣ ಕಸಿದುಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ದುಷ್ಕರ್ಮಿಗಳು ಗೌರವ್ ಕೈ ಬೆರಳುಗಳಿಗೆ ಚಾಕುವಿನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿವೆ. ಈ ಬಗ್ಗೆ ಕಮಿಷನರ್‌ಗೆ ನೇರವಾಗಿ ಗೌರವ್ ಟ್ವೀಟ್ ಮಾಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತರು ಪ್ರಕರಣದ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details