ಕರ್ನಾಟಕ

karnataka

ETV Bharat / state

ವಿಧಾನಸಭಾ ಚುನಾವಣೆ: ಭದ್ರತೆಗೆ ಒಂದೂವರೆ ಲಕ್ಷಕ್ಕೂ ಹೆಚ್ಚು ಪೊಲೀಸರ ನಿಯೋಜನೆ - Security guard

ಒಟ್ಟು 58,282 ಮತಗಟ್ಟೆಗಳಿದ್ದು, ಅದರಲ್ಲಿ 11,617 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಅನುಗುಣವಾಗಿ ಸೂಕ್ಷ್ಮ ಮತಗಟ್ಟೆಗಳಿಗೆ ಪೊಲೀಸ್ ಸಿಬ್ಬಂದಿ ಜೊತೆಗೆ ಹೆಚ್ಚುವರಿಯಾಗಿ ಸಿಎಪಿಎಫ್ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.

Police
ಪೊಲೀಸರು

By

Published : May 8, 2023, 4:32 PM IST

ಬೆಂಗಳೂರು:ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಹಿರಂಗ ಪ್ರಚಾರಕ್ಕೆ ಇನ್ನೂ‌ ಕೆಲವೇ ಗಂಟೆಗಳು ಬಾಕಿಯಿದ್ದು, ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಂತಿಮ ಹಂತದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮೇ 10ರಂದು 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಪಾರದರ್ಶಕವಾಗಿ ಚುನಾವಣೆ ನಡೆಸಲು ಹಾಗೂ ಅಹಿತಕರ ಘಟನೆ ನಡೆಯಂತೆ ಮುಂಜಾಗ್ರತ ಕ್ರಮ ಕೈಗೊಂಡಿರುವ ರಾಜ್ಯ ಪೊಲೀಸ್ ಇಲಾಖೆಯು ಕೇಂದ್ರಿಯ ಪಡೆ, ಅನ್ಯ ರಾಜ್ಯಗಳ ಪೊಲೀಸರು ಸೇರಿದಂತೆ‌ ಒಟ್ಟು 1.56 ಲಕ್ಷ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಿದೆ.

ಭದ್ರತಾ ಸಿಬ್ಬಂದಿಯ ಸಂಪೂರ್ಣ ಮಾಹಿತಿ:ಚುನಾವಣಾ ಕರ್ತವ್ಯಕ್ಕಾಗಿ 304 ಡಿವೈಎಸ್‌ಪಿಗಳು, 991 ಇನಸ್ಪೆಕ್ಟರ್, 2,610 ಪಿಎಸ್‌ಐ, 5,803 ಎಎಸ್‌, 46,421 ಹೆಚ್‌ಸಿ ಹಾಗೂ ಪಿಸಿ 27,990 ಹೋಂ ಗಾರ್ಡ್ಸ್ ಸೇರಿದಂತೆ ಒಟ್ಟು 84,119 ಮತ್ತು ಸಿಬ್ಬಂದಿಯನ್ನು ನಿಯೋಜನೆಗೊಳಿಸಲಾಗಿದೆ. ಅವಶ್ಯಕತೆ ಅಗನುಗುಣವಾಗಿ ಅಧಿಕಾರಿ ಹಾಗೂ ಸಿಬ್ಬಂದಿ ಕೊರತೆಯನ್ನು ಸರಿದೂಗಿಸಲು ಹೊರ ರಾಜ್ಯಗಳಿಂದ ಸುಮಾರು 8,500 ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕಾಗಿ ಪಡೆಯಲಾಗಿದೆ. 650 ಸಿಎಪಿಎಫ್ ಪಡೆಗಳ ಜೊತೆಗೆ ರಾಜ್ಯ ಸಶಸ್ತ್ರ ಮೀಸಲು ಪಡೆ ಸಹ ನಿಯೋಜಿಸಲಾಗಿದೆ. ಒಟ್ಟಾರೆಯಾಗಿ 1,56,000 ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಕ್ಕೆ ನೇಮಿಸಲಾಗಿದೆ.

700ಕ್ಕೂ ಹೆಚ್ಚು ಚೆಕ್‌ ಪೋಸ್ಟ್‌:ಒಟ್ಟು 58,282 ಮತಗಟ್ಟೆಗಳಿದ್ದು, ಅದರಲ್ಲಿ 11,617 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಅನುಗುಣವಾಗಿ ಸೂಕ್ಷ್ಮ ಮತಗಟ್ಟೆಗಳಿಗೆ ಪೊಲೀಸ್ ಸಿಬ್ಬಂದಿ ಜೊತೆಗೆ ಹೆಚ್ಚುವರಿಯಾಗಿ ಸಿಎಪಿಎಫ್ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 2,930 ಸೆಕ್ಟರ್ ಮೊಬೈಲ್​ಗಳ ಕಾರ್ಯಾಚರಣೆಯಲ್ಲಿದ್ದು, ಒಂದೊಂದು ಸೆಕ್ಟರ್ ಮೊಬೈಲ್‌ಗಳಿಗೆ 20 ಬೂತ್‌ಗಳನ್ನು ನಿಗದಿಪಡಿಸಲಾಗಿದೆ. ಪಿಎಸ್​ಐ ಅಥವಾ ಎಎಸ್‌ಐ ದರ್ಜೆಯ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನೇಮಿಸಿ ನಿರಂತರವಾದ ಗಸ್ತನ್ನು ಕೈಗೊಳ್ಳಲಾಗುತ್ತದೆ. ಸೆಕ್ಟರ್ ಮೊಬೈಲ್‌ಗಳ ಮೇಲ್ವಿಚಾರಣೆಗಾಗಿ 149 ಮೇಲ್ವಿಚಾರಣಾ ಮೊಬೈಲ್‌ಗಳಿದ್ದು, ಮೇಲ್ವಿಚಾರಣ ಮೊಬೈಲ್ಸ್‌ನ ಉಸ್ತುವಾರಿಗಾಗಿ ಒರ್ವ ಪೊಲೀಸ್ ಇನಸ್ಪೆಕ್ಟರ್ ದರ್ಜೆಯ ಅಧಿಕಾರಿಯನ್ನು ನೇಮಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ, ಅವ್ಯವಹಾರ ತಡೆಗಟ್ಟುಲು 200ಕ್ಕೂ ಹೆಚ್ಚು ವಿಚಕ್ಷಣಾ ದಳ ನೇಮಿಸಲಾಗಿದೆ. ಸೂಕ್ಷ್ಮ ಪ್ರದೇಶಗಳನ್ನೊಳಗೊಂಡಂತೆ ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲಾ ಗಡಿಭಾಗದಲ್ಲಿ ಸುಮಾರು 700ಕ್ಕೂ ಹೆಚ್ಚು ಚೆಕ್‌ ಪೋಸ್ಟ್‌ ತೆರೆಯಲಾಗಿದೆ.

115 ಪ್ರಕರಣಗಳು ದಾಖಲು, 157 ಕೋಟಿ‌ ರೂ. ಮುಟ್ಟುಗೋಲು:ಕಳೆದ 6 ತಿಂಗಳಿನಿಂದ ಜಾರಿಯಾಗದಿರುವ 5,500 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿ ಮಾಡಲಾಗಿದ್ದು, ಕಳೆದ 03 ತಿಂಗಳಲ್ಲಿ ಒಟ್ಟು 24,959 ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ 30,418 ಭದ್ರತಾ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವುಗಳಲ್ಲಿ ಸನ್ನಡತೆ ಆಧಾರದ ಮೇಲೆ 53,406 ವ್ಯಕ್ತಿಗಳನ್ನು ಬಾಂಡ್ ಓವರ್ ಮಾಡಲಾಗಿದೆ. ಭದ್ರತಾ ಪ್ರಕರಣಗಳನ್ನು ಉಲ್ಲಂಘಿಸಿದ 115 ಪ್ರಕರಣಗಳಲ್ಲಿ ರೂ.157 ಕೋಟಿ‌ ರೂ. ಮುಟ್ಟುಗೋಲು ಮಾಡಿಕೊಳ್ಳಲಾಗಿದೆ.

714 ವ್ಯಕ್ತಿಗಳು ಗಡಿಪಾರು:ಚುನಾವಣೆಯಲ್ಲಿ ಕಾನೂನು ಸುವ್ಯವಸ್ಥೆಗೆ ತೊಡಕಾಗದಂತೆ ಶಾಂತಿಯುತವಾದ ಮತದಾನಕ್ಕಾಗಿ ಕ್ರಿಮಿನಲ್ ಹಿನ್ನೆಲೆವಿರುವ 714 ವ್ಯಕ್ತಿಗಳ ವಿರುದ್ಧ ಗಡಿಪಾರು ಮಾಡಲಾಗಿದೆ. 68 ಹವ್ಯಾಸಿ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ‌ ನೆರೆಹೊರೆ ರಾಜ್ಯಗಳ ಗಡಿಭಾಗಗಳಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಹಂತದ ಅಧಿಕಾರಿಗಳಾದ ಐಜಿಪಿ, ಎಸ್‌ಪಿ, ಡಿಸಿ ಹಾಗೂ ಇತರ ಅಧಿಕಾರಿಗಳ ನೇತೃತ್ವದಲ್ಲಿ ಅಂತರ್ ರಾಜ್ಯ ಗಡಿಭಾಗದ ಜಿಲ್ಲೆಯ ಅಧಿಕಾರಿಗಳೊಂದಿಗೆ 50ಕ್ಕೂ ಹೆಚ್ಚು ಸಮನ್ವಯ ಸಭೆಗಳನ್ನು ಕೈಗೊಂಡಿದ್ದು, ಚುನಾವಣೆಯಲ್ಲಿ ನೆರೆ ರಾಜ್ಯಗಳಿಂದ ಅನಧಿಕೃತ ಹಣ, ಮದ್ಯ, ಉಚಿತ ಹಾಗೂ ಇತರೆ ವಸ್ತುಗಳು ಮತ್ತು ರೌಡಿ ಆಸಾಮಿಗಳು ಹಾಗೂ ಸಮಾಜಘಾತುಕ ವ್ಯಕ್ತಿಗಳ ಚಲನವಲನದ ಬಗ್ಗೆ ಸೂಕ್ಷ್ಮ ನಿಗಾವಹಿಸಲು ಗಡಿಭಾಗದ ಚೆಕ್‌ ಪೋಸ್ಟ್‌ಗಳಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ. ಇದೇ ಕಾರಣಕ್ಕಾಗಿ ಹೊರ ರಾಜ್ಯಗಳು ಸಹ ತಮ್ಮ ಗಡಿಭಾಗದಲ್ಲಿ ಚೆಕ್‌ ಪೋಸ್ಟ್‌ಗಳನ್ನು ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಗೋವಾ ಸ್ಥಾಪಿಸಲಾಗಿದೆ.

650 ಸಿಎಪಿಎಫ್ ಕಂಪನಿಗಳು:ಚುನಾವಣಾ ಕರ್ತವ್ಯಕ್ಕಾಗಿ ನೇಮಿಸಲಾದ ಒಟ್ಟು 650 ಸಿಎಪಿಎಫ್ ಪಡೆಗಳಲ್ಲಿ 101 ಸಿಆರ್‌ಪಿಎಫ್, 108 ಬಿಎಸ್‌ಎಫ್, 75 ಸಿಐಎಸ್‌ಎಫ್, 70 ಐಟಿಬಿಪಿ, 75 ಎಸ್‌ಎಸ್‌ಬಿ, 35 ಆರ್ ಪಿಎಫ್ ಮತ್ತು 186 ಎಸ್‌ಪಿ ಪಡೆಗಳಿದ್ದು, ಅವುಗಳನ್ನು ಸೂಕ್ಷ್ಮ ವಿಧಾನಸಭಾ ಕ್ಷೇತ್ರಗಳ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ನಿಯೋಜಿಸಲಾಗಿದೆ. ರಾಜಕೀಯ ಮತ್ತು ವೆಚ್ಚ ನಿರ್ವಹಣೆಯಲ್ಲಿ ಸೂಕ್ಷ್ಮವಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ರೂಟ್, ಮಾರ್ಚ್ ಮಾಡಿಸುವ ಮೂಲಕ ಕಾನೂನು ಸುವ್ಯವಸ್ಥೆ ಜಾಗೃತಿ ಮೂಡಿಸಲಾಗಿದೆ ಹಾಗೂ ಎಫ್‌ಎಸ್‌ಟಿ, ಎಸ್‌ಎಸ್‌ಟಿ, ಇವಿಎಂ ರಕ್ಷಣೆ, ಸೂಕ್ಷ್ಮ ಮತಗಟ್ಟೆಗಳನ್ನು ಹೊಂದಿರುವ ಕ್ಲಸ್ಟರ್, ಮತಗಟ್ಟೆಗಳಲ್ಲಿ ಈ ಕಂಪನಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ.

ಇದನ್ನೂ ಓದಿ:ವರುಣಾದಲ್ಲಿ ಸಿದ್ದರಾಮಯ್ಯಗೆ ಸೋಲು, ಕನಕಪುರದಲ್ಲಿ ಡಿಕೆಶಿಗೆ ಟೆನ್ಷನ್: ನಳಿನ್ ಕುಮಾರ್ ಕಟೀಲ್

ABOUT THE AUTHOR

...view details