ಕರ್ನಾಟಕ

karnataka

ETV Bharat / state

ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು ಹಾಡಹಗಲೇ ದರೋಡೆ - kengeri astrology home robbed

ಜೋತಿಷ್ಯ ಕೇಳುವ ನೆಪದಲ್ಲಿ ಬಂದ ದರೋಡೆಕೋರರು ಜೋತಿಷಿ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ.

robbery in kengeri
ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು ಹಾಡಹಗಲೇ ದರೋಡೆ

By

Published : Jul 9, 2022, 9:56 PM IST

ಬೆಂಗಳೂರು: ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿರುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಜ್ಯೋತಿಷಿ ಪ್ರಮೋದ್ ಮನೆಗೆ ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದಿದ್ದ ಮೂವರು ದರೋಡೆಕೋರರು ಮನೆಯಲ್ಲಿ ಒಬ್ಬರೇ ಇರುವ ವಿಷಯ ತಿಳಿದು ಅವರ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ 400 ಗ್ರಾಂ ಚಿನ್ನಾಭರಣ, 350 ಗ್ರಾಂ ಬೆಳ್ಳಿ, 5 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಕೆಂಗೇರಿ ಠಾಣಾ ಪೊಲೀಸರು ಹಾಗೂ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಇದಿ:ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಇನ್ಸ್​ಪೆಕ್ಟರ್​ ಅಮಾನತು

ABOUT THE AUTHOR

...view details