ಬೆಂಗಳೂರು : ನಟ ದುನಿಯಾ ವಿಜಯ್ಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಜಿಮ್ ತರಬೇತುದಾರ ಪಾನಿಪುರಿ ಕಿಟ್ಟಿ ಹಾಗೂ ಅವರ ಅಣ್ಣನ ಮಗ ಪಿ.ಮಾರುತಿ ಗೌಡ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಪ್ರಕರಣ ರದ್ದು ಕೋರಿ ಪಾನಿಪುರಿ ಕಿಟ್ಟಿ ಹಾಗೂ ಪಿ.ಮಾರುತಿಗೌಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿಯ ಅಣ್ಣನ ಮಗ ಮಾರುತಿ ಗೌಡ ಅವರನ್ನ ದುನಿಯಾ ವಿಜಯ್ ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಟ ವಿಜಯ್ ಹೈಗ್ರೌಂಡ್ ಪೋಲಿಸ್ ಠಾಣೆಗೆ ವಿಚಾರಣೆಗೆ ಬಂದಿದ್ದರು. ಈ ವೇಳೆ ಪೊಲೀಸ್ ಠಾಣೆ ಹತ್ತಿರ ಬಂದ ಪಾನಿಪುರಿ ಕಿಟ್ಟಿ ದುನಿಯಾ ವಿಜಯ್ ಜೊತೆ ಮಾತಿಗೆ ಮಾತು ಬೆಳೆಸಿದ್ದರು. ಈ ಸಂದರ್ಭದಲ್ಲಿ ಪಾನಿಪುರಿ ಕಿಟ್ಟಿ ಮತ್ತು ಮಾರುತಿ ಗೌಡ ದುನಿಯಾ ವಿಜಯ್ ಕೊಲೆ ಮಾಡುತ್ತೇವೆ ಎಂದು ಬೆದರಿಕೆಯೊಡ್ಡಿದ್ದಾರೆಂದು ವಿಜಯ್ ದೂರು ದಾಖಲಿಸಿದ್ದರು.
ಪ್ರಕರಣದ ರದ್ದು ಕೋರಿ ಪಾನಿಪುರಿ ಕಿಟ್ಟಿ ಹೈಕೋರ್ಟ್ಗೆ ಅರ್ಜಿ ಹಾಕಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ರದ್ದುಗೊಳಿಸಿ ಆದೇಶಿಸಿದೆ.