ಕರ್ನಾಟಕ

karnataka

ETV Bharat / state

ದುಷ್ಕರ್ಮಿಗಳಿಂದ ರೌಡಿಶೀಟರ್ ಮೇಲೆ ಲಾಂಗು, ಮಚ್ಚಿನಿಂದ ಹಲ್ಲೆ.. - ಯಲಹಂಕ ಪೊಲೀಸ್​ ಠಾಣೆ

ಹಲ್ಲೆಗೊಳಗಾದ ರೌಡಿಶೀಟರ್​ನನ್ನು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್‌ಗೆ ದಾಖಲಿಸಲಾಗಿದೆ.

Rowdy sheetar assault
Rowdy sheetar assault

By

Published : Jun 6, 2020, 7:00 PM IST

ಬೆಂಗಳೂರು :ಮಹಾನಗರದಲ್ಲಿ ರೌಡಿಗಳ ಅಟ್ಟಹಾಸ ಹೆಚ್ಚಾಗಿದ್ದು ಹಳೇ ದ್ವೇಷ ಹಿನ್ನೆಲೆಯಲ್ಲಿ ರೌಡಿಶೀಟರ್​ ಮೇಲೆ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕೋಗಿಲು ನಿವಾಸಿ ಹಾಗೂ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಲೋಕೇಶ್ (28) ಮೇಲೆ ಮಾರಣಾಂತಿಕ ಹಲ್ಲೆಗೆ‌ ಒಳಗಾದವ.

ಠಾಣೆಯ ಸಮೀಪದ‌ ಇಟ್ಟಿಗೆ ಫ್ಯಾಕ್ಟರಿ ಬಳಿ ಹೋಗುವಾಗ ಅಟ್ಯಾಕ್ ಮಾಡಿದ ದುಷ್ಕರ್ಮಿಗಳು ಲಾಂಗ್ ಹಾಗೂ ಮಚ್ಚಿನಿಂದ ಲೋಕೇಶ್ ತಲೆ, ಹೊಟ್ಟೆ ಹಾಗೂ ಕೈಗಳಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ರೌಡಿಶೀಟರ್​ನನ್ನು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್‌ಗೆ ದಾಖಲಿಸಲಾಗಿದೆ. ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ABOUT THE AUTHOR

...view details