ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಪ್ರಕರಣ ತಿಳಿದು ಸಿಎಂ ಬಿ ಎಸ್ ಯಡಿಯೂರಪ್ಪನವರು ದಿಗ್ಭ್ರಮೆಗೊಳಗಾಗಿದ್ದಾರೆ.
ತನ್ವೀರ್ ಸೇಠ್ ಮೇಲೆ ಹಲ್ಲೆ.. ಡಿಸಿ,ಎಸ್ಪಿಯಿಂದ ಮಾಹಿತಿ ಕಲೆ ಹಾಕುತ್ತಿರುವ ಸಿಎಂ.. - ಸಿಎಂ ಬಿ.ಎಸ್. ಯಡಿಯೂರಪ್ಪ
ಶಾಸಕ ತನ್ವೀರ್ ಸೇಠ್ ಮೇಲೆ ಆಗಿರುವ ಹಲ್ಲೆಯ ವಿಷಯ ತಿಳಿದ ಸಿಎಂ ಬಿ ಎಸ್ ಯಡಿಯೂರಪ್ಪನವರು ದಿಗ್ಭ್ರಮೆಗೊಳಗಾಗಿದ್ದಾರೆ. ಅಲ್ಲದೇ ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠರೊಂದಿಗೆ ಸಂಪರ್ಕದಲ್ಲಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಘಟನೆಯ ಬಗ್ಗೆ ತಿಳಿದು ತೀವ್ರ ನೋವಾಗಿದೆ. ಸ್ಥಳೀಯ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಶಾಸಕರ ಚಿಕಿತ್ಸೆ ಕುರಿತು ಮಾಹಿತಿ ಪಡೆದಿದ್ದೇನೆ ಎಂದಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಕೂಡಲೇ ಮೈಸೂರಿಗೆ ತೆರಳಿ ತನ್ವೀರ್ ಸೇಠ್ ಅವರ ಆರೋಗ್ಯ ವಿಚಾರಿಸಿದ್ರು. ಚಿಕಿತ್ಸೆಯ ಮಾಹಿತಿ ಪಡೆಯುವಂತೆ ಸೂಚಿಸಿದ್ದು, ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ತನ್ವೀರ್ ಸೇಠ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ರು.