ನೆಲಮಂಗಲ (ಬೆಂಗಳೂರು):ನಗರದ ಶಿವನಗರ ಮತ್ತು ಪ್ರಸನ್ನ ಆಂಜನೇಯ ಬಡಾವಣೆಯ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರನೇ ಸಲ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಕಳೆದೊಂದು ವಾರದಿಂದ ಚಿರತೆ ಪ್ರತ್ಯಕ್ಷವಾಗುತ್ತಲೇ ಇದೆ, ಬಡಾವಣೆಯ ನಾಯಿಗಳು ನಾಪತ್ತೆಯಾಗಿರುವುದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಆರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಆದರೆ ಆರಣ್ಯ ಇಲಾಖೆ ಸ್ಥಳದಲ್ಲಿ ಬೋನ್ ಇಟ್ಟು ಚಿರತೆ ಸೆರೆ ಹಿಡಿಯುವ ಪ್ರಯತ್ನ ಮಾಡಿಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ.