ಬೆಂಗಳೂರು:ರೂಮ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿಯೊಬ್ಬ ಲಾಡ್ಜ್ದಲ್ಲಿ ರೂಮ್ ಶೇರ್ ಮಾಡಿಕೊಂಡು ಮೂರ್ನಾಲ್ಕು ದಿನಗಳ ಕಾಲ ವಾಸ್ತವ್ಯ ಹೂಡಿರುವ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ದೂರು ನೀಡಿದ ಹಿನ್ನೆಲೆಯಲ್ಲಿ ಕಾಡುಗುಡಿ ಠಾಣೆಯ ಪೊಲೀಸರು ತಮಿಳುನಾಡು ಮೂಲದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಗೋವರ್ಧನ್ ಶಿವರೆಡ್ಡಿ ಬಂಧಿತ ಆರೋಪಿ. ಈತ ಡಿಸೆಂಬರ್ 16ರಂದು ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಕೇರಳ ಮೂಲದ ಯುವತಿಯ ಪರಿಚಯ ಮಾಡಿಕೊಂಡಿದ್ದ. ಅಕ್ಷರಸ್ಥೆಯಾಗಿದ್ದ ಯುವತಿ ಕೆಲಸ ಸಲುವಾಗಿ ಬೆಂಗಳೂರಿಗೆ ಬಂದಿದ್ದಳು. ಉಳಿದುಕೊಳ್ಳಲು ರೂಮ್ ಬೇಕೆಂದು ಆರೋಪಿ ಬಳಿ ಹೇಳಿಕೊಂಡಿದ್ದಾಳೆ. ತನಗೆ ಗೊತ್ತಿರುವ ಲಾಡ್ಜ್ ಇದೆ ಎಂದು ಹೇಳಿ ಕಾಡುಗೋಡಿ ಬಳಿ ಇರುವ ಬಾಲಾಜಿ ಲಾಡ್ಜ್ ಕರೆದೊಯ್ದಿದ್ದಾನೆ.