ಕರ್ನಾಟಕ

karnataka

ETV Bharat / state

ವಿಶ್ವಕಪ್‌: ಆಸ್ಟ್ರೇಲಿಯಾ-ಪಾಕಿಸ್ತಾನ ಹಣಾಹಣಿ: ಮೈದಾನದೊಳಗೆ, ಹೊರಗೆ ಭಾರಿ ಭದ್ರತೆ - icc world cup 2023

ಕ್ರೀಡಾಂಗಣದ ಒಳಗೆ ಹಾಗೂ ಹೊರಗೆ ಮೂರು ಹಂತಗಳಲ್ಲಿ ಭದ್ರತೆ ವಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ

By ETV Bharat Karnataka Team

Published : Oct 20, 2023, 12:20 PM IST

Updated : Oct 20, 2023, 4:37 PM IST

ನಗರ ಪೊಲೀಸ್ ಆಯುಕ್ತ ಬಿ ದಯಾನಂದ್

ಬೆಂಗಳೂರು:ಈ ಬಾರಿಯ ವಿಶ್ವಕಪ್‌ನಲ್ಲಿ ತನ್ನ ಮೊದಲ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿರುವ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ. ಆಸ್ಟ್ರೇಲಿಯಾ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಎರಡು ಅಥವಾ ಮೂರು ಹಂತಗಳಲ್ಲಿ ಕ್ರೀಡಾಂಗಣ ಒಳಗೆ ಮತ್ತು ಹೊರಗೆ ಭದ್ರತೆ ವಹಿಸಲಾಗಿದ್ದು, ತಂಡಗಳಿಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

"ಕ್ರೀಡಾಂಗಣಕ್ಕೆ ಆಗಮಿಸುವ ಕ್ರಿಕೆಟ್ ಪ್ರೇಮಿಗಳು, ಗಣ್ಯರ ಓಡಾಟಕ್ಕೆ ಬರುವ ಓಲಾ, ಊಬರ್ ಮತ್ತಿತರ ಟ್ಯಾಕ್ಸಿಗಳಿಗೆ ಪಿಕ್ ಅಪ್ ಮತ್ತು ಡ್ರಾಪ್​ಗೆ ಸ್ಥಳ ನಿಗದಿ ಮಾಡಲಾಗಿದೆ. ಬಿಎಂಟಿಸಿ ಬಸ್ ನಿಲ್ದಾಣಕ್ಕೂ ಸೂಚನೆ ನೀಡಲಾಗಿದೆ. ಮೈದಾನದ ಒಳಗೂ ಸಾಕಷ್ಟು ನಿಯಮ ಜಾರಿ ಮಾಡಲಾಗಿದ್ದು, ಒಪ್ಪಿಗೆ ಸೂಚಿಸಲ್ಪಟ್ಟ ಪೋಸ್ಟರ್ ಹೊರತುಪಡಿಸಿ ಇತರೇ ಪೋಸ್ಟರ್​ಗಳನ್ನು ಪ್ರದರ್ಶಿಸಲು ಅವಕಾಶವಿಲ್ಲ. ಡ್ರೋಣ್ ಕ್ಯಾಮೆರಾಗಳ ಮೂಲಕ ಕ್ರೀಡಾಂಗಣದ ಸುತ್ತಮುತ್ತ ಗಮನವಹಿಸಲಾಗುತ್ತದೆ" ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರವೂ ಈ ಕ್ರೀಡಾಕೂಟಕ್ಕೆ ಆತಿಥ್ಯವಹಿಸುತ್ತಿರುವುದು ಸಂತೋಷದ ವಿಚಾರ. ಹಾಗೂ ಯಶಸ್ವಿಗೊಳಿಸಿಕೊಡಬೇಕಾದ ಜವಾಬ್ದಾರಿ ಬೆಂಗಳೂರು ನಗರ ಪೊಲೀಸರ ಮೇಲಿದೆ ಎಂದು ಹೇಳಿದರು.

ಮೊದಲ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು:ವಿಶ್ವಕಪ್ ಟೂರ್ನಿ ಅ.5 ರಂದು ಆರಂಭವಾಗಿದ್ದು, ಇಂದು 18ನೇ ಪಂದ್ಯ ಚಿನ್ನಸ್ವಾಮಿಯಲ್ಲಿ ನಡೆಯಲಿದೆ. ಪ್ರಸಕ್ತ ಟೂರ್ನಿಯಲ್ಲಿ ಚಿನ್ನಸ್ವಾಮಿಯಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಇದಾಗಿದ್ದು, ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾದಿದ್ದಾರೆ. ಇನ್ನು ಈ ವಿಶ್ವಕಪ್‌ನ ಐದು ಪಂದ್ಯಗಳಿಗೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ವಿಶ್ವಕಪ್ ಕ್ರಿಕೆಟ್ ಅಭಿಮಾನಿಗಳಿಗೆ 'ನಮ್ಮ ಮೆಟ್ರೋ'ದಿಂದ ವಿಶೇಷ ವ್ಯವಸ್ಥೆ:ಐಸಿಸಿ ಏಕದಿನ ವಿಶ್ವಕಪ್‌ ಕ್ರಿಕೆಟ್‌ನ 5 ಪಂದ್ಯಗಳಿಗೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನ ಆತಿಥ್ಯವಹಿಸುತ್ತಿದ್ದು, ವೀಕ್ಷಣೆಗೆ ತೆರಳುವ ಅಭಿಮಾನಿಗಳಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್ (ಬಿಎಂಆರ್‌ಸಿಎಲ್‌) ಸಿಹಿಸುದ್ದಿ ನೀಡಿದೆ. ಪಂದ್ಯ ವೀಕ್ಷಿಸಿ ವಾಪಸಾಗುವಾಗ ಮೆಟ್ರೋ ಬಳಸುವವರಿಗೆ ರಿಟರ್ನ್‌ ಟಿಕೆಟ್‌ ಬೆಲೆಯನ್ನು 50 ರೂ. ನಿಗದಿಪಡಿಸಲಾಗಿದೆ.

ಪೇಪರ್ ಟಿಕೆಟ್​ಗಳನ್ನು ಆಯಾ ದಿನಗಳಲ್ಲಿ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿಯೂ ಬೆಳಿಗ್ಗೆ 7 ಗಂಟೆಯಿಂದ ವಿತರಣೆ ಮಾಡಲಾಗುತ್ತದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಸಂಜೆ 4 ಗಂಟೆಯ ನಂತರ ಒಂದು ಪ್ರಯಾಣಕ್ಕೆ ಮಾತ್ರ ರಿಟರ್ನ್ ಟಿಕೆಟ್ ಮಾನ್ಯವಾಗಿರಲಿದೆ.

ಇದನ್ನೂ ಓದಿ :ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ-ಪಾಕಿಸ್ತಾನ ವಿಶ್ವಕಪ್ ಕ್ರಿಕೆಟ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಿಗಿ ಭದ್ರತೆ

Last Updated : Oct 20, 2023, 4:37 PM IST

ABOUT THE AUTHOR

...view details