ಕರ್ನಾಟಕ

karnataka

ETV Bharat / state

ದುಬಾರಿ ದುನಿಯಾದಲ್ಲಿ ಆಶಾ ಕಾರ್ಯಕರ್ತೆಯರಿಗೆ 1 ಸಾವಿರ ಗೌರವಧನ ಕಡಿಮೆ: ನಾಗಲಕ್ಷ್ಮಿ - ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮಿ

ಕೋವಿಡ್ ಸಮಯದಲ್ಲಿ ಆರೋಗ್ಯ ಇಲಾಖೆಯ ಆಧಾರ ಸ್ತಂಭವಾಗಿ ನಿಂತಿದ್ದು ಆಶಾ ಕಾರ್ಯಕರ್ತೆಯರು.‌ ರಾಜ್ಯದಲ್ಲಿ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಇದ್ದು, ಗೌರವ ಧನ ಹೆಚ್ಚಳ ಮಾಡಿರುವುದನ್ನ ಸ್ವಾಗತಿಸುತ್ತೇವೆ. ಆದ್ರೆ ಈ ಮೊತ್ತ ಈಗ ಕಡಿಮೆಯೇ ಆಗಿದೆ ಎಂದು ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Asha Activists Association Secretary
ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮಿ

By

Published : Mar 4, 2022, 3:44 PM IST

ಬೆಂಗಳೂರು:ಇಂದಿನ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ಕೇವಲ 1 ಸಾವಿರ ಗೌರವಧನ ಹೆಚ್ಚಳ ಮಾಡಿರುವುದು ತೃಪ್ತಿ ತಂದಿಲ್ಲ ಅಂತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮಿ ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮಿ ಮಾತನಾಡಿದರು

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ಆರೋಗ್ಯ ಇಲಾಖೆಯ ಆಧಾರ ಸ್ತಂಭವಾಗಿ ನಿಂತಿದ್ದು ಆಶಾ ಕಾರ್ಯಕರ್ತೆಯರು.‌ ರಾಜ್ಯದಲ್ಲಿ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಇದ್ದು, ಗೌರವಧನ ಹೆಚ್ಚಳ ಮಾಡಿರುವುದನ್ನ ಸ್ವಾಗತ ಮಾಡುತ್ತೇವೆ ಎಂದರು.

ಕಳೆದ ಮೂರು ವರ್ಷಗಳಿಂದ ಕೋವಿಡ್ ವಿರುದ್ಧದ ಹೋರಾಟದಲ್ಲಿ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡಿದ್ದೇವೆ.‌ ಆದರೆ, ಕೇವಲ ಒಂದು ಸಾವಿರ ರೂ. ಗೌರವ ಧನ ನೀಡಿರುವುದು ಸರಿಯಲ್ಲ. ಮಾಡಿದ ಕೆಲಸಕ್ಕೆ ತಕ್ಕ ಪ್ರತಿಫಲ ಸಿಗುವ ನಿರೀಕ್ಷೆಯನ್ನ ಈ ಸಲದ ಬಜೆಟ್​ನಲ್ಲಿ ಇಟ್ಟುಕೊಂಡಿದ್ದೆವು. ಕಳೆದ ಮೂರು ವರ್ಷದಿಂದ ಗೌರವ ಧನ ಹೆಚ್ಚಳವಾಗಿಲ್ಲ. ಇವರ ಸೇವೆ ಗುರುತಿಸಿ ಗೌರವ ಧನ ಹೆಚ್ಚಳ ಮಾಡುವಂತೆ ಒತ್ತಾಯಿಸಿದರು.

ಓದಿ:ಮಂಗಳೂರಿನಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ: ವಿದ್ಯಾರ್ಥಿ ಗುಂಪುಗಳ ಮಧ್ಯೆ ಸಂಘರ್ಷ

ABOUT THE AUTHOR

...view details