ಕರ್ನಾಟಕ

karnataka

ETV Bharat / state

ಕ್ರೀಡಾ ಕ್ಷೇತ್ರದ ಸಾಧಕರಿಗೆ ಏಕಲವ್ಯ ಸೇರಿದಂತೆ ವಿವಿಧ ಪ್ರಶಸ್ತಿ ಪ್ರದಾನ - awards given by Bsy for sports achievers

ವಿವಿಧ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

Awards given by Bsy for sports achievers at bengalore
ಕ್ರೀಡಾ ಕ್ಷೇತ್ರದ ಸಾಧಕರಿಗೆ ಏಕಲವ್ಯ ಸೇರಿದಂತೆ ವಿವಿಧ ಪ್ರಶಸ್ತಿ ಪ್ರಧಾನ

By

Published : Nov 2, 2020, 1:19 PM IST

ಬೆಂಗಳೂರು: ಕ್ರಿಕೆಟ್, ಕಬ್ಬಡಿ, ಹಾಕಿ ಸೇರಿದಂತೆ ವಿವಿಧ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ 2017, 2018 ಹಾಗೂ 2019 ನೇ ಸಾಲಿನ ಏಕಲವ್ಯ, ಕರ್ನಾಟಕ ಕ್ರೀಡಾರತ್ನ, ಕ್ರೀಡಾ ಪೋಷಕ ಪ್ರಶಸ್ತಿ ಹಾಗೂ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​​​​​ನಲ್ಲಿ ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು, ತರಬೇತುದಾರರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕಂಚಿನ ಪ್ರತಿಮೆ, ಸ್ಕ್ರೋಲ್, ಸಮವಸ್ತ್ರ, ಎರಡು ಲಕ್ಷ ರೂ. ನಗದು ಬಹುಮಾನ ಒಳಗೊಂಡಿರುವ ಏಕಲವ್ಯ ಪ್ರಶಸ್ತಿಯನ್ನು 31 ಮಂದಿ ಕ್ರೀಡಾಪಟುಗಳಿಗೆ ನೀಡಲಾಯಿತು. ಅದೇ ರೀತಿ ಜೀವಮಾನ ಸಾಧನೆ ಪ್ರಶಸ್ತಿ 6 ಮಂದಿಗೆ ನೀಡಲಾಗಿದ್ದು, ಕಂಚಿನ ಪ್ರಶಸ್ತಿ, ಸ್ಕ್ರೋಲ್, ಸಮವಸ್ತ್ರ ಹಾಗೂ ಒಂದೂವರೆ ಲಕ್ಷ ರೂ. ನಗದು ಒಳಗೊಂಡಿದೆ. ಕ್ರೀಡಾ ರತ್ನ ಪ್ರಶಸ್ತಿ 27 ಮಂದಿಗೆ ನೀಡಿದ್ದು, ಪ್ರಶಸ್ತಿ ಫಲಕ, ಸ್ಜ್ರೋಲ್, ಸಮವಸ್ತ್ರ, ಒಂದು ಲಕ್ಷ ರೂ. ನಗದು ಹಾಗೂ 5 ಮಂದಿಗೆ ಕ್ರೀಡಾ ಪೋಷಕ ಪ್ರಶಸ್ತಿ ಪತ್ರ, 5 ಲಕ್ಷ ರೂ. ನಗದು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಸಿ.ಟಿ.ರವಿ, ಕಂದಾಯ ಸಚಿವ ಆರ್. ಅಶೋಕ್ , ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕಲ್ಪನಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಕೆ.ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ, ರಾಜ್ಯ ಒಲಂಪಿಕ್ ಸಂಸ್ಥೆಯ ಕೆ. ಗೋವಿಂದರಾಜ್, ಶಾಸಕ ರಿಜ್ವಾನ್ ಅರ್ಷದ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಏಕಲವ್ಯ ಪ್ರಶಸ್ತಿಗೆ ಭಾಜನರಾದ ಕ್ರಿಕೆಟ್ ಆಟಗಾರರಾದ ಕೆ.ಎಲ್. ರಾಹುಲ್, ಮಯಾಂಕ್ ಅಗರವಾಲ್ ಹಾಗೂ ವೇದಾ ಕೃಷ್ಣಮೂರ್ತಿ ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಐಪಿಎಲ್ ನಡೆಯುತ್ತಿರುವುದರಿಂದ ಮೂವರು ಕಾರ್ಯಕ್ರಮಕ್ಕೆ ಗೈರಾಗಿದ್ದರು.

For All Latest Updates

ABOUT THE AUTHOR

...view details