ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಪ್ರತಿ ಠಾಣಾ ವ್ಯಾಪ್ತಿಯಲ್ಲೂ ಪೊಲೀಸ್ ಹದ್ದಿನ ಕಣ್ಣು ಇಡಲಿದೆ.
ರಾಮಮಂದಿರ ಶಿಲಾನ್ಯಾಸ ಹಿನ್ನೆಲೆ ಬೆಂಗಳೂರಲ್ಲಿ ಹೈ ಅಲರ್ಟ್: ಗಲ್ಲಿ ಗಲ್ಲಿಗಳಲ್ಲಿ ಗರುಡ ಪಡೆ ಕಣ್ಗಾವಲು
ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, 144 ಸೆಕ್ಷನ್ ಜಾರಿಯಲ್ಲಿದೆ.
ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಗಲ್ಲಿ ಗಲ್ಲಿಗಳಲ್ಲೂ ಗರುಡ ಪಡೆ, 60ಕ್ಕೂ ಹೆಚ್ಚು ಕೆಎಸ್ಆರ್ಪಿ ತುಕಡಿ, ಪೊಲೀಸ್ ಸಿಬ್ಬಂದಿ ಭದ್ರತೆ ಕೈಗೊಳ್ಳಲಿದ್ದಾರೆ.
ಕೇಂದ್ರ ವಿಭಾಗದ ಡಿಸಿಪಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಡಿಸಿಪಿ ಅನುಚೇತ್ ಅವರು ಮಾತಾಡಿ, ಶ್ರೀರಾಮ ಮಂದಿರ ಶಂಕುಸ್ಥಾಪನೆ ಪೂಜೆ ಹಿನ್ನೆಲೆಯಲ್ಲಿ ಈಗಾಗಲೇ ಸರ್ಕಾರದ ಸೂಚನೆಯಂತೆ ಬೆಂಗಳೂರಿನಾದ್ಯಂತ ಹೈ ಅಲರ್ಟ್ ಇರಲಿದೆ. ಕೇಂದ್ರ ವಿಭಾಗದ ವ್ಯಾಪ್ತಿಯಲ್ಲಿ ವಿಶೇಷ ಬಂದೋಬಸ್ತ್ ಮಾಡಿದ್ದೇವೆ. ಹಾಗೆ ಹೆಚ್ಚಿನ ಪೊಲೀಸರನ್ನು ಸೂಕ್ಷ್ಮ ಪ್ರದೇಶದಲ್ಲಿ ನಿಯೋಜನೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಆದೇಶವನ್ನು ಪಾಲಿಸಲಾಗುತ್ತದೆ ಎಂದರು.