ಹೊಸಕೋಟೆ :ಉಪಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರನ್ನು ಸೆಳೆಯಲು ಯಡಿಯೂರಪ್ಪ ಸರ್ಕಾರ ಮುಂದಾಗಿದೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳನ್ನು ಹೊಡೆದಂತೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ಕ್ಷೇತ್ರದ ಜನತೆಗೆ ಕೆರೆಗಳಿಗೆ ನೀರು ತುಂಬಿಸುವ100 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಸೋಮವಾರ ಚಾಲನೆ ನೀಡಿದರು.
ಸರ್ಕಾರ ರಚನೆಗೆ ಸಹಕರಿಸಿದ ಅನರ್ಹರಿಗೆ ಭರ್ಜರಿ ಗಿಫ್ಟ್ ನೀಡುವ ಮೂಲಕ ಋಣ ತೀರಿಸಲು ಬಿಎಸ್ವೈ ಮುಂದಾಗಿದ್ದಾರೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅನುಗೊಂಡನಹಳ್ಳಿ ಹಾಗೂ ಜಡಿಗೆನಹಳ್ಳಿ ವ್ಯಾಪ್ತಿಯ 30 ಕೆರೆಗಳಿಗೆ 100 ಕೋಟಿ ರೂ. ಮೊತ್ತದಏತ ನೀರಾವರಿಯೋಜನೆಗೆ ಚಾಲನೆ ನೀಡಲು ಪಟ್ಟಣಕ್ಕೆ ಆಗಮಿಸಿದ ಬಿಎಸ್ವೈಗೆ, ಎಂಟಿಬಿ ಬೃಹತ್ ಸೇಬಿನ ಹಾರ ಹಾಕುವ ಮೂಲಕ ಅದ್ಧೂರಿಯಾಗಿ ಬರಮಾಡಿಕೊಂಡರು. ಆದರೆ ಇದೇ ಕಾರ್ಯಕ್ರಮಕ್ಕೆ ಸಂಸದ ಬಿ. ಎನ್. ಬಚ್ಚೇಗೌಡರು ಗೈರಾಗುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.
ಯೋಜನೆ ಉದ್ಘಾಟಿಸಿದ ಸಿಎಂ, ತಾಲೂಕಿನ ಅಭಿವೃದ್ಧಿಗೆ ತಮ್ಮ ಸರ್ಕಾರ ಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಮತ್ತೊಮ್ಮೆ ಎಂ. ಟಿ. ಬಿ. ನಾಗರಾಜ್ರನ್ನು ಅಯ್ಕೆ ಮಾಡುವಂತೆ ನೆರೆದಿದ್ದವರಿಗೆ ಕರೆ ನೀಡಿದರು. ಎಂ. ಟಿ. ಬಿ. ನಾಗರಾಜ್ರವರ ಎಲ್ಲಾ ಬೇಡಿಕೆಗಳಿಗೂ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದರು.