ಕರ್ನಾಟಕ

karnataka

ETV Bharat / state

ಧರಣಿ ನಿರತ ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಜೊತೆ ಸಿಎಂ ಚರ್ಚೆ; ಬಿಎಸ್​ವೈ ಜೊತೆಗೂಡಿ ಮನವೊಲಿಕೆಗೆ ಯತ್ನ - B S Yadiyurappa trying to Persuasion to congress leaders

ಪಂಚರಾಜ್ಯಗಳ ಚುನಾವಣೆ ಬಗ್ಗೆ ಯಡಿಯೂರಪ್ಪ, ಅಶೋಕ್ ಜೊತೆ ಡಿಕೆಶಿ, ಸಿದ್ದರಾಮಯ್ಯ ಚರ್ಚೆ ನಡೆಸಿದರು.

b-s-yadiyurappa-trying-to-persuasion-to-congress-leaders
ಧರಣಿನಿರತ ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

By

Published : Feb 17, 2022, 8:24 PM IST

ಬೆಂಗಳೂರು: ಧರಣಿ ನಿರತ ಕಾಂಗ್ರೆಸ್ ಶಾಸಕರನ್ನು ಮಾಜಿ ಸಿಎಂ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದು, ಮನವೊಲಿಕೆಗೆ ಯತ್ನಿಸಿದರು.

ಧರಣಿನಿರತ ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿಕೆಶಿ ಬಳಿ ಕೂತು ಕೆಲ ಹೊತ್ತು ಮಾತುಕತೆ ನಡೆಸಿದರು. ಕಂದಾಯ ಸಚಿವ ಆರ್.ಅಶೋಕ್ ಕೂಡ ಸಾಥ್​ ನೀಡಿದರು. ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಯಡಿಯೂರಪ್ಪ ಧರಣಿ ನಿರತ ಪ್ರತಿಪಕ್ಷ ಕಾಂಗ್ರೆಸ್ ನ ಮನವೊಲಿಕೆ ಮಾಡಿದರು.

ಭೇಟಿ ವೇಳೆ ನಾಯಕರು ಪರಸ್ಪರ ಕುಶಲೋಪರಿ ವಿಚಾರಿಸಿದರು. ಹಳೆಯ ಘಟನೆಗಳನ್ನು ಮೆಲುಕು ಹಾಕಿದರು. ಈ ವೇಳೆ, ಪಂಚರಾಜ್ಯಗಳ ಚುನಾವಣೆ ಬಗ್ಗೆ ಯಡಿಯೂರಪ್ಪ, ಅಶೋಕ್ ಜೊತೆ ಡಿಕೆಶಿ, ಸಿದ್ದರಾಮಯ್ಯ ಚರ್ಚೆ ನಡೆಸಿದರು.

ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದರು. ಈ ವೇಳೆ ಯಡಿಯೂರಪ್ಪ ಪ್ರತಿಪಕ್ಷಗಳ ಮನವೊಲಿಕೆಗೆ ಯತ್ನಿಸಿದರು. ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಮನವೊಲಿಕೆಗೆ ಯತ್ನ ನಡೆಯಿತು.

ಓದಿ:ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್‌ ಕಂಪನಿಗಳಿಗೆ ಆಹ್ವಾನ: ಬೆಂಗಳೂರಿನಲ್ಲಿ ಇಂಡಸ್ಟ್ರಿಯಲ್‌ ಪಾರ್ಕ್‌ ಅಭಿವೃದ್ಧಿ

ABOUT THE AUTHOR

...view details