ಕರ್ನಾಟಕ

karnataka

ETV Bharat / state

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನನ್ನ ವಿರುದ್ಧ ಗೆದ್ದು ತೋರಿಸಿ: ಸಿದ್ದುಗೆ ಶ್ರೀರಾಮುಲು ಬಹಿರಂಗ ಸವಾಲು! - ಶ್ರೀ ರಾಮುಲು ಟ್ವೀಟ್

ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟು ಬರುತ್ತೇನೆ, ನೀವೂ ರಾಜೀನಾಮೆ ಕೊಟ್ಟು ಬನ್ನಿ. ನನ್ನ ವಿರುದ್ಧ ಗೆದ್ದು ತೋರಿಸಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಬಹಿರಂಗ ಸವಾಲೆಸೆದಿದ್ದಾರೆ.

ಸಿದ್ದುಗೆ ಶ್ರೀರಾಮುಲು ಬಹಿರಂಗ ಸವಾಲು

By

Published : Nov 19, 2019, 1:21 PM IST

ಬೆಂಗಳೂರು:ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟು ಬರುತ್ತೇನೆ, ನೀವೂ ರಾಜೀನಾಮೆ ಕೊಟ್ಟು ಬನ್ನಿ. ನನ್ನ ವಿರುದ್ಧ ಗೆದ್ದು ತೋರಿಸಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಬಹಿರಂಗ ಸವಾಲೆಸೆದಿದ್ದಾರೆ.

ಉಪ ಮುಖ್ಯಮಂತ್ರಿ ಸ್ಥಾನ ಸಿಗದೇ ಶ್ರೀರಾಮುಲು‌ ಹತಾಶರಾಗಿದ್ದಾರೆ. ಅವರು ಇಷ್ಟೊತ್ತಿಗಾಗಲೇ ಬಿಜೆಪಿಗೆ ರಾಜೀನಾಮೆ ನೀಡಿ‌ ಹೊರಬರಬೇಕಿತ್ತು ಎಂದು ಸಿದ್ದರಾಮಯ್ಯ ಮೈಸೂರಿನಲ್ಲಿ ನೀಡಿದ್ದ ಹೇಳಿಕೆಗೆ ಸರಣಿ ಟ್ವೀಟ್ ಮೂಲಕ‌ ಸಿದ್ದರಾಮಯ್ಯಗೆ ಶ್ರೀರಾಮುಲು ಸವಾಲೆಸೆದಿದ್ದಾರೆ.

ಮಾನ್ಯ ಸಿದ್ದರಾಮಯ್ಯನವರೇ, ನಿಮಗೊಂದು ಸವಾಲು. ಬಾದಾಮಿಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ನೀವು ಗೆದ್ದಿರಬಹುದು. ಮೀಸಲಾತಿ ಇಲ್ಲದ ಕ್ಷೇತ್ರವಾದರೂ ಸರಿಯೇ ನನ್ನ ವಿರುದ್ಧ ಗೆದ್ದು ತೋರಿಸಿ. ಶಾಸಕ‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬನ್ನಿ. ನಾನೂ ರಾಜೀನಾಮೆ ಕೊಟ್ಟು ಬರುತ್ತೇನೆ. ಜನ ಯಾರನ್ನು ಗೆಲ್ಲಿಸುತ್ತಾರೋ ನೋಡಿಯೇ ಬಿಡೋಣ ಎಂದು ಟ್ವೀಟ್ ಮೂಲಕ ಸವಾಲು ಹಾಕಿದ್ದಾರೆ.

ನಾನೇನು ಸ್ವಾರ್ಥದ ಕೆಲಸ ಮಾಡಿದ್ದೇನೆ ಹೇಳಿ ಸಿದ್ದರಾಮಯ್ಯನವರೇ. ಉಪ ಮುಖ್ಯಮಂತ್ರಿ ಮಾಡಿ ಹಣಕಾಸು ಖಾತೆಯಂತಹ ಮಹತ್ವದ ಖಾತೆಗಳನ್ನು ನೀಡಿದ್ದರೂ ಮುಖ್ಯಮಂತ್ರಿ ಮಾಡಲಿಲ್ಲ ಎಂದು ಸುಳ್ಳು ಹೇಳಿಕೊಂಡು ನಿಮ್ಮನ್ನು ಬೆಳೆಸಿ ನಾಯಕನನ್ನಾಗಿ ರೂಪಿಸಿದ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿ ಆ ಪಕ್ಷದ ಹಿರಿಯ ನಾಯಕರಿಗೆಲ್ಲಾ ಅನ್ಯಾಯ ಮಾಡಿ ಮುಖ್ಯಮಂತ್ರಿಯಾಗಿದ್ದು ನಿಮ್ಮ ಸ್ವಾರ್ಥವಲ್ಲವೇ? ನನಗೆ ಮಾನ, ಮರ್ಯಾದೆ ಇದೆಯಾ ಎಂದು ಕೇಳಿದ್ದೀರಿಲ್ಲಾ. ಅವರಪ್ಪನಾಣೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಹೇಳಿದ ನೀವು ನಂತರ ಅವರ ಮನೆ ಬಾಗಿಲಿಗೆ ಹೋಗಿ ಕರೆತಂದು ಮುಖ್ಯಮಂತ್ರಿ ಮಾಡಿ ನಂತರ ಷಡ್ಯಂತ್ರ ಮಾಡಿ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಿದ ನಿಮಗೆ ಮಾನ, ಮರ್ಯಾದೆ ಎಂದರೆ ಏನು ಎಂಬುದು ಗೊತ್ತಿದೆಯೇ ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ABOUT THE AUTHOR

...view details