ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಸ್ಪರ್ಧಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ವರಿಷ್ಠರ ಆದೇಶಕ್ಕೆ ನಾನು ಬದ್ದ ಎಂದರು.
ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ: ಬಿ.ವೈ.ವಿಜಯೇಂದ್ರ - B Y Vijayendra Reaction on By-election in Bangalloer
ಉಪ ಚುನಾವಣೆಯಲ್ಲಿ ಯಾವ ಕ್ಷೇತ್ರದ ಉಸ್ತುವಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ
ವಿಕಾಸಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಆಗಲಿದೆ. ಪ್ರತಿ ಬಾರಿ ಉಪ ಚುನಾವಣೆ ಬಂದ ಸಂದರ್ಭದಲ್ಲಿ ನನ್ನ ಹೆಸರು ಕೇಳಿ ಬರುತ್ತದೆ. ಉಪ ಚುನಾವಣೆಯಲ್ಲಿ ಯಾವ ಕ್ಷೇತ್ರದ ಉಸ್ತುವಾರಿ ನೀಡಿದರೂ ನಿಭಾಯಿಸುತ್ತೇನೆ' ಎಂದು ಹೇಳಿದರು.
ಇನ್ನು, ಸಂಪುಟ ಸೇರ್ಪಡೆ ವಿಚಾರದ ಪ್ರಶ್ನೆಗೆ, 'ಮೊದಲು ಉಪ ಚುನಾವಣೆ ಮುಗಿಸೋಣ' ಎಂದರು.
Last Updated : Oct 1, 2021, 3:04 PM IST