ಬೆಂಗಳೂರು: ಕೆಲಸ ಮಾಡಿ ಕೊಡುವುದಾಗಿ ತಮ್ಮ ಹೆಸರೇಳಿಕೊಂಡು ಜನರಿಗೆ ವಂಚನೆ ಮಾಡಿದ್ದ ಸಚಿವ ಶ್ರೀರಾಮುಲು ಪಿಎ ರಾಜು ಬಂಧನದ ಬೆನ್ನಲ್ಲೇ ಈ ವಿಷಯವನ್ನು ಪ್ರತಿಪಕ್ಷಗಳು ಅಸ್ತ್ರವಾಗಿ ಬಳಸಿಕೊಳ್ಳುವ ಆತಂಕವನ್ನು ವ್ಯಕ್ತಪಡಿಸಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಸಿಎಂ ಪುತ್ರ ಬಿ ವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.