ಕರ್ನಾಟಕ

karnataka

By ETV Bharat Karnataka Team

Published : Jan 4, 2024, 5:50 PM IST

ETV Bharat / state

ಬಾಬಾಬುಡನ್ ಗಿರಿ ಕೇಸ್ ರೀಓಪನ್ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

''ಬಾಬಾಬುಡನ್ ಗಿರಿಯ ಪ್ರಕರಣವನ್ನು ರೀ ಓಪನ್ ಮಾಡಿಲ್ಲ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

CM Siddaramaiah
ಬಾಬಾಬುಡನ್ ಗಿರಿ ಕೇಸ್ ರೀಓಪನ್ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು:''ಬಾಬಾಬುಡನ್ ಗಿರಿಯಲ್ಲಿ ಈ ಹಿಂದೆ ನಡೆದಿದ್ದ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ತಪ್ಪು ಮಾಹಿತಿಯಾಗಿದ್ದು, ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ಸುಳ್ಳು. ಮತ್ತು ದುರುದ್ದೇಶಪೂರಿತ ಸಂಗತಿಯಾಗಿದೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ.

ಕೆಲವು ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದೆ ಎಂದಿದ್ದಾರೆ.

2017ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ. 2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು. 2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು, ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೋರ್ಟ್​ನಿಂದಲೇ ಸಮನ್ಸ್ ಜಾರಿಯಾಗಿದೆ. ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹಜವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ಸಿಎಂ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ:ಹಿಂದೂ ಕಾರ್ಯಕರ್ತನ ಬಂಧನ: ರಾಮ ಭಕ್ತರಲ್ಲಿ ಭಯ ಹುಟ್ಟಿಸಲು ಹರಿಪ್ರಸಾದ್​ರಿಂದ ಹೇಳಿಕೆ; ಆರ್ ಅಶೋಕ್

ABOUT THE AUTHOR

...view details