ಬೆಂಗಳೂರು :ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬಾಬು ಜಗಜೀವನ್ ರಾಮ್ ಅವರ 113ನೇ ಜಯಂತಿ ಆಚರಿಸಲಾಯಿತು. ಭಾರತದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ರಾಂ ಅವರ ಜನ್ಮ ದಿನದ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವ ಆಂಜನೇಯ ಅವರು ಪುಷ್ಪ ನಮನ ಸಲ್ಲಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಬಾಬು ಜಗಜೀವನ್ ರಾಮ್ ಅವರ 113 ನೇ ಜಯಂತಿ ಆಚರಣೆ - ಕೆಪಿಸಿಸಿ ಕಚೇರಿಯಲ್ಲಿ ಜಯಂತಿ ಆಚರಣೆ
ಬಾಬು ಜಗಜೀವನ್ರಾಂ ಅವರ ಜಯಂತಿಯ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ನಾಯಕರು ಗೌರವ ಸಲ್ಲಿಸಿದರು.
![ಕೆಪಿಸಿಸಿ ಕಚೇರಿಯಲ್ಲಿ ಬಾಬು ಜಗಜೀವನ್ ರಾಮ್ ಅವರ 113 ನೇ ಜಯಂತಿ ಆಚರಣೆ babu jagjivan ram 113th jayanthi](https://etvbharatimages.akamaized.net/etvbharat/prod-images/768-512-6669265-466-6669265-1586073463364.jpg)
ವಾರ್ ರೂಂಗೆ ಸಿದ್ದರಾಮಯ್ಯ ಭೇಟಿ :ಕೊರೊನಾ ತಡೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ತೆರೆಯಲಾಗಿರುವ ವಾರ್ ರೂಮ್ಗೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಡಿ ಕೆ ಶಿವಕುಮಾರ್ ಹಾಗೂ ಸಲೀಂ ಅಹ್ಮದ್ ಅವರೊಂದಿಗೆ ಸಮಾಲೋಚಿಸಿದರು.
ರಾಜ್ಯದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ರೂ ಆತಂಕ ಪಡುವ ವಾತಾವರಣವೇನೂ ಇಲ್ಲ. ಯಾವುದೇ ಕಾರಣಕ್ಕೂ ಈ ಸಂದರ್ಭ ಜನ ನಿಗದಿತ ಸುರಕ್ಷತಾ ಕ್ರಮ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಕಾರ್ಯವನ್ನು ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಮನವಿ ಮಾಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಹ ಈ ಸಂದರ್ಭದಲ್ಲಿ ಹಾಜರಿದ್ದರು.