ಬೆಂಗಳೂರು: ಸಿ.ಎಂ ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ ಆಗಿರುವುದಾಗಿ ಸಹಾಯಕ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಘೋಷಿಸಿದ್ದಾರೆ.
ರಾಜ್ಯ ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗಬೇಕಿದ್ದ ಪರಿಷತ್ನ ಒಂದು ಸ್ಥಾನಕ್ಕೆ ಸೆ.11 ರಂದು ಚುನಾವಣೆಯನ್ನು ನಿಗದಿ ಪಡಿಸಲಾಗಿತ್ತು. ಬಿಜೆಪಿಯಿಂದ ಚಿಂಚನಸೂರು ಹೊರತುಪಡಿಸಿ ಬೇರೆ ಯಾವ ಅಭ್ಯರ್ಥಿಗಳೂ ಕಣಕ್ಕಿಳಿದಿರಲಿಲ್ಲ. ಪರಿಷತ್ನ ಒಂದು ಸ್ಥಾನಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್ ಮಾತ್ರ ನಾಮಪತ್ರ ಸಲ್ಲಿಸಿದ್ದರು.