ಕರ್ನಾಟಕ

karnataka

ETV Bharat / state

ಚಿಂಚನಸೂರಿಗೆ ಕೋಲಿ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷಗಿರಿ! - ಮಾಜಿ ಸಚಿವ ಬಾಬುರಾವ್ ಚಿಂಚನಸೂರು

ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರನ್ನು ಕೋಲಿ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದ್ದು, ಬಾಬುರಾವ್ ಚಿಂಚನಸೂರ್​ರನ್ನು ರಾಜ್ಯ ಸಚಿವ ಸಂಪುಟ‌ ದರ್ಜೆಯ ಸ್ಥಾನಮಾನದೊಂದಿಗೆ ನೇಮಕ‌ ಮಾಡಲಾಗಿದೆ.

ಚಿಂಚನಸೂರಿಗೆ ಕೋಲಿ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷಗಿರಿ!

By

Published : Oct 13, 2019, 6:00 AM IST

ಬೆಂಗಳೂರು:ಕೋಲಿ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದ್ದು, ಬಾಬುರಾವ್ ಚಿಂಚನಸೂರ್​ರನ್ನು ರಾಜ್ಯ ಸಚಿವ ಸಂಪುಟ‌ ದರ್ಜೆಯ ಸ್ಥಾನಮಾನದೊಂದಿಗೆ ನೇಮಕ‌ ಮಾಡಲಾಗಿದೆ.

ಚಿಂಚನಸೂರಿಗೆ ಕೋಲಿ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷಗಿರಿ!

ಕೋಲಿ ಸಮುದಾಯ ಅಭಿವೃದ್ಧಿ ‌ನಿಗಮ ಪ್ರಸ್ತುತ ಸ್ಥಾಪನೆ ಹಂತದಲ್ಲಿದ್ದು, ನಿಗಮವು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಗೊಳ್ಳುವವರೆಗೂ ಅಧ್ಯಕ್ಷರಿಗೆ ರಾಜ್ಯ ಸಚಿವ ಸಂಪುಟ ದರ್ಜೆಯ ಸ್ಥಾನಮಾನದ ಸೌಲಭ್ಯಗಳನ್ನು ನೀಡಲು ಸೂಚನೆ ನೀಡಲಾಗಿದೆ.

2019 ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರನ್ನು ಗೆಲ್ಲಿಸುವಲ್ಲಿ ಚಿಂಚನಸೂರ್ ಪ್ರಮುಖ ಪಾತ್ರ ವಹಿಸಿದ್ದರು.

ಇನ್ನೂ ಈ ಮೊದಲು ಕಾಂಗ್ರೆಸ್ ನಲ್ಲಿದ್ದ ಬಾಬೂರಾವ್ ಚಿಂಚನಸೂರ್ ಅವರು ಚುನಾವಣೆ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಕಲಬುರಗಿಯಲ್ಲಿ ಕೋಲಿ ಸಮುದಾಯದ ಮತಗಳನ್ನು ಕ್ರೋಢೀಕರಿಸಿ, ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರನ್ನು ಗೆಲ್ಲಿಸಿಕೊಡುವಲ್ಲಿ ಯಶಸ್ಸು ಕಂಡಿದ್ದರು.

ಇದೀಗ ಬಾಬೂರಾವ್ ಚಿಂಚನಸೂರ್ ರನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೋಲಿ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.

ABOUT THE AUTHOR

...view details