ಬೆಂಗಳೂರು :ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆ ಆರಂಭವಾಗಿದೆ. ವಿಧಾನಸೌಧದ ಮೊದಲ ಮಹಡಿಯ ಸಮಿತಿ ಕೊಠಡಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಿಎಂ ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ನಾಯಕರಾದ ಹೆಚ್ ಡಿ ರೇವಣ್ಣ, ಬಂಡೆಪ್ಪ ಕಾಶಂಪೂರ್, ಸಚಿವ ಜಗದೀಶ್ ಶೆಟ್ಟರ್, ಡಿಸಿಎಂ ಗೋವಿಂದ ಕಾರಜೋಳ ಹಾಗೂ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಸೇರಿ ಹಲವರು ಭಾಗಿಯಾಗಿದ್ದಾರೆ.
ಬಿಎಸಿ ಸಭೆ ಆರಂಭ.. ಬಜೆಟ್ ಅಧಿವೇಶನ ಮುಂದೂಡಿಕೆಗೆ ನಿರ್ಧಾರ?
ಸಿಎಂ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರೊಂದಿಗೆ ಸ್ಪೀಕರ್ ಈಗಾಗಲೇ ಸಮಾಲೋಚನೆ ನಡೆಸಿದ್ದಾರೆ. ಬಜೆಟ್ ಅಧಿವೇಶನ ಮುಂದೂಡಿಕೆ ಕುರಿತು ಗಂಭೀರ ಚರ್ಚೆ ನಡೆಸಿದ್ದಾರೆ.
ಕಲಾಪ ಮುಂದೂಡಿಕೆ?: ಅನಿರ್ದಿಷ್ಟಾವಧಿಗೆ ಬಜೆಟ್ ಅಧಿವೇಶನ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಇಂದಿನ ಸಭೆಯಲ್ಲಿ ಆ ಕುರಿತು ಅಂತಿಮ ತೀರ್ಮಾನ ಆಗಲಿದೆ. ಸಿಎಂ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರೊಂದಿಗೆ ಸ್ಪೀಕರ್ ಈಗಾಗಲೇ ಸಮಾಲೋಚನೆ ನಡೆಸಿದ್ದಾರೆ. ಬಜೆಟ್ ಅಧಿವೇಶನ ಮುಂದೂಡಿಕೆ ಕುರಿತು ಗಂಭೀರ ಚರ್ಚೆ ನಡೆಸಿದ್ದಾರೆ.
ದೇಶದಲ್ಲಿ ಕೊರೊನಾ 3ನೇ ಹಂತ ತಲುಪುವ ಸಾಧ್ಯತೆ ಕಂಡು ಬರುತ್ತಿರುವ ಹಿನ್ನೆಲೆ ಸಾಕಷ್ಟು ಕಟ್ಟೆಚ್ಚರವಹಿಸಲಾಗುತ್ತಿದೆ. ರಾಜ್ಯದಲ್ಲಿಯೂ ಕೊರೊನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನ ಒಂದೆಡೆ ಸೇರುವುದನ್ನು ನಿಯಂತ್ರಿಸುವ ಉದ್ದೇಶದಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ ನಡೆಸಲಾಗಿದೆ.