ಬೆಂಗಳೂರು:ದೆಹಲಿ ಹೈಕೋರ್ಟ್ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ನೀಡಿ, ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನಸಾಮಾನ್ಯರ ನಂಬಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನ್ಯಾಯಾಲಯದ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.